Monday, August 8, 2022

Latest Posts

ಕೋವಿಡ್ ಬಿಕ್ಕಟ್ಟು: ಇಂದು ರಾಜ್ಯಗಳ ಮುಖ್ಯಮಂತ್ರಿ, ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯಗಳಲ್ಲಿ ಕೋವಿಡ್ ನಿರ್ವಹಣೆಯ ಕುರಿತು ಮಾಹಿತಿ ಪಡೆಯಲು ಇಂದು ಪ್ರಧಾನಿ ಮೋದಿ 10 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಪಿಎಂಒ ಕಚೇರಿ, ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದು, ರಾಜ್ಯಗಳಲ್ಲಿ ಕೋವಿಡ್ ಬಿಕ್ಕಟ್ಟು ನಿವಾರಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ. ಸಭೆಯಲ್ಲಿ ಕರ್ನಾಟಕ, ಬಿಹಾರ, ಅಸ್ಸಾಂ, ಚಂಡೀಘರ್, ತಮಿಳುನಾಡು, ಉತ್ತರಾಖಂಡ, ಮಧ್ಯಪ್ರದೇಶ, ಗೋವಾ, ಹಿಮಾಚಲ ಪ್ರದೇಶ ಹಾಗೂ ದೆಹಲಿ ರಾಜ್ಯಗಳ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಈ ವೇಳೆ ಗ್ರಾಮೀಣ ಮಟ್ಟದಲ್ಲಿ ಕೊರೋನಾ ನಿರ್ವಹಣೆಗೆ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದು, ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ಕಲಬುರಗಿ, ರಾಯಚೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss