ನಾಳೆ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಇಂದು ವಾರಣಾಸಿಯಲ್ಲಿ ಬೃಹತ್‌ ರೋಡ್‌ ಶೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸತತ 3ನೇ ಬಾರಿಗೆ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿರುವ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗ್ಗೆ ಕಾಲಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದಿನವಾದ ಇಂದು ವಾರಣಾಸಿಯಲ್ಲಿ ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ. ಇದರೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ.

ಮೋದಿ ನಾಮಪತ್ರ ಸಲ್ಲಿಕೆ ವೇಳೆ ಲಕ್ಷಾಂತರ ಜನ ಸೇರಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಾರಣಾಸಿಯಲ್ಲಿ ಅದ್ಧೂರಿ ರೋಡ್‌ ಶೋ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!