ಇಂದಿನಿಂದ ಉತ್ತರಾಖಂಡದಲ್ಲೂ ಓಡಲಿದೆ ವಂದೇ ಭಾರತ್‌ ರೈಲು: ಪ್ರಧಾನಿ ಮೋದಿ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನ ಮಂತ್ರಿ ನರೇಂದ್ರ ಗುರುವಾರ ಡೆಹ್ರಾಡೂನ್‌ನಿಂದ ದೆಹಲಿಗೆ ಸ್ಥಳೀಯವಾಗಿ ನಿರ್ಮಿಸಲಾದ ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ.
ಇದು ಉತ್ತರಾಖಂಡದಲ್ಲಿ ಪರಿಚಯಿಸಲಾದ ಮೊದಲ ವಂದೇ ಭಾರತ್‌ ರೈಲಾಗಿದೆ. ವಿಶ್ವದರ್ಜೆಯ ಸೌಕರ್ಯಗಳೊಂದಿಗೆ, ಇದು ಆರಾಮದಾಯಕ ಪ್ರಯಾಣದ ಅನುಭವಗಳ ಹೊಸ ಯುಗಕ್ಕೆ ನಾಂದಿ ಹಾಡುತ್ತದೆ, ವಿಶೇಷವಾಗಿ ರಾಜ್ಯಕ್ಕೆ ಪ್ರಯಾಣಿಸುವ ಪ್ರವಾಸಿಗರಿಗೆ ಅನುಕೂಲವಾಗಲಿದೆ.

ಉತ್ತರಾಖಂಡದ ಸಂಪರ್ಕವು ದೊಡ್ಡ ಉತ್ತೇಜನವನ್ನು ಪಡೆಯಲು ಸಿದ್ಧವಾಗಿದೆ. ಇಂದು ಬೆಳಿಗ್ಗೆ 11 ಗಂಟೆಗೆ, ದೆಹಲಿ ಮತ್ತು ಡೆಹ್ರಾಡೂನ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾನಲನೆ ನೀಡಲಿದ್ದೇನೆ. ಉತ್ತರಾಖಂಡದ ರೈಲು ಹಳಿಗಳ ಶೇಕಡಾ 100 ರಷ್ಟು ವಿದ್ಯುದ್ದೀಕರಣದ ಸಾಧನೆಯು ಈ ಸಂದರ್ಭವನ್ನು ಇನ್ನಷ್ಟು ವಿಶೇಷವಾಗಿಸುತ್ತದೆ. ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಉತ್ತರಾಖಂಡದಲ್ಲಿ ಹೊಸದಾಗಿ ವಿದ್ಯುದ್ದೀಕರಿಸಿದ ರೈಲು ಮಾರ್ಗ ವಿಭಾಗಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಇದರೊಂದಿಗೆ ರಾಜ್ಯವು ತನ್ನ ಸಂಪೂರ್ಣ ರೈಲು ಮಾರ್ಗವನ್ನು 100 ಪ್ರತಿಶತ ವಿದ್ಯುದ್ದೀಕರಣಗೊಳಿಸಲಿದೆ. ವಿದ್ಯುದ್ದೀಕರಿಸಿದ ವಿಭಾಗಗಳಲ್ಲಿ ವಿದ್ಯುತ್ ಎಳೆತದಿಂದ ಚಲಿಸುವ ರೈಲುಗಳು ವೇಗದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತವೆ.

ರಾಜ್ಯದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಉದ್ಘಾಟನಾ ಸಮಾರಂಭದಲ್ಲಿ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಡೆಹ್ರಾಡೂನ್ ರೈಲು ನಿಲ್ದಾಣದಲ್ಲಿ ಉಪಸ್ಥಿತರಿರುತ್ತಾರೆ ಎಂದು ಮೊರಾದಾಬಾದ್ ರೈಲ್ವೆ ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ (ಡಿಸಿಎಂ) ಸುಧೀರ್ ಸಿಂಗ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!