ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 : ಇಂದು ಕಾರ್ಯಕ್ರಮವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲಕ್ನೋದಲ್ಲಿ ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಅನ್ನು ಉದ್ಘಾಟಿಸಲಿದ್ದಾರೆ.

ಯುಪಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಫೆಬ್ರವರಿ 10-12 ರ ನಡುವೆ ಮೂರು ದಿನಗಳ ಕಾಲ ನಡೆಯಲಿದೆ. ಇದು ಉತ್ತರ ಪ್ರದೇಶ ಸರ್ಕಾರದ ಪ್ರಮುಖ ಹೂಡಿಕೆ ಶೃಂಗಸಭೆಯಾಗಿದೆ. ವ್ಯಾಪಾರದ ಅವಕಾಶಗಳನ್ನು ಒಟ್ಟಾಗಿ ಅನ್ವೇಷಿಸಲು ಮತ್ತು ಪಾಲುದಾರಿಕೆಗಳನ್ನು ರೂಪಿಸಲು ವಿಶ್ವದಾದ್ಯಂತದ ನೀತಿ ನಿರೂಪಕರು, ಉದ್ಯಮದ ನಾಯಕರು, ಶಿಕ್ಷಣ ತಜ್ಞರು, ಚಿಂತಕರು ಮತ್ತು ನಾಯಕರನ್ನು ಒಟ್ಟುಗೂಡಿಸುವ ಗುರಿಯನ್ನು ಈ ಮೆಗಾ ಈವೆಂಟ್ ಹೊಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ ವಿದೇಶ ಮತ್ತು ದೇಶದ ಕೈಗಾರಿಕೋದ್ಯಮಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಶೃಂಗಸಭೆಯ ಅವಧಿಯಲ್ಲಿ, ಒಟ್ಟು 34 ಸೆಷನ್‌ಗಳು ಇರುತ್ತವೆ. ಇವುಗಳಲ್ಲಿ 10 ಸೆಷನ್‌ಗಳು ಮೊದಲ ದಿನ, 13 ಎರಡನೇ ದಿನ ಮತ್ತು 11 ಕೊನೆಯ ದಿನ ಇರಲಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯದ ಕೈಗಾರಿಕಾ ಅಭಿವೃದ್ಧಿ ಸಚಿವ ನಂದಗೋಪಾಲ್ ಗುಪ್ತಾ ನಂದಿ ಹಾಗೂ ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ, ಕೆ ಚಂದ್ರಶೇಖರನ್, ಕುಮಾರ್ ಮಂಗಳಂ ಬಿರ್ಲಾ ಮತ್ತು ಆನಂದ್ ಮಹೀಂದ್ರ ಅವರು ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!