ಪ್ರಧಾನಿ ಮೋದಿ ಎರಡನೇ ದಿನದ ಗುಜರಾತ್‌ ಪರ್ಯಟನೆ, ಹಲವು ಕಾರ್ಯಕ್ರಮಗಳಲ್ಲಿ ಭಾಗಿ

 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ನರೇಂದ್ರ ಮೋದಿ ಅವರ ಗುಜರಾತ್ ಪರ್ಯಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ದಿನಗಳ ಗುಜರಾತ್‌ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಮಂಗಳವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಗಾಂಧಿನಗರದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜೊತೆ ಕೆಲಕಾಳ ಸಮಯ ಕಳೆದು ಭವಿಷ್ಯದ ಆಯ್ಕೆಗಳ ಕುರಿತು ವಿದ್ಯಾರ್ಥಿಗಳಿಗೆ ಹಲವು ಸಲಹೆಗಳನ್ನು ನೀಡಿದರು. ಬುಧವಾರ ಪ್ರಧಾನಿ ಮೋದಿ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಲಿದ್ದಾರೆ. ಗುಜರಾತ್‌ನ ಬನಸ್ಕಾಂತ ಮತ್ತು ಜಾಮ್‌ನಗರ ದಾಹೋದ್‌ನಲ್ಲಿ ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮಹಾನಿರ್ದೇಶಕ ಡಾ. ಟೆಡ್ರೊಸ್ ಘೆಬ್ರಿಯಾಸ್ ಕೂಡ ಪ್ರಧಾನಿ ಮೋದಿಯವರಿಗೆ ಸಾಥ್‌ ನೀಡಲಿದ್ದಾರೆ. ಟೆಡ್ರೊಸ್ ಅವರೊಂದಿಗೆ ಪ್ರಧಾನಿ ಜಾಮ್‌ನಗರದಲ್ಲಿ ಡಬ್ಲ್ಯುಎಚ್‌ಒ ಗ್ಲೋಬಲ್ ಸೆಂಟರ್ ಫಾರ್ ಟ್ರೆಡಿಷನಲ್ ಮೆಡಿಸಿನ್ (ಜಿಸಿಟಿಎಂ) ಕಟ್ಟಡದ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ.

ನಂತರ ಬನಸ್ಕಾಂತದಲ್ಲಿರುವ ಬನಾಸ್ ಡೈರಿ ಕಾಂಪ್ಲೆಕ್ಸ್‌ನಲ್ಲಿ ಹೊಸ ಡೈರಿ ಸಂಕೀರ್ಣ ಮತ್ತು ಆಲೂಗಡ್ಡೆ ಸಂಸ್ಕರಣಾ ಘಟಕವನ್ನು ಮೋದಿ ಉದ್ಘಾಟಿಸಲಿದ್ದಾರೆ. 600 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಡೈರಿ ಕಾಂಪ್ಲೆಕ್ಸ್ ಆಲೂಗೆಡ್ಡೆ ಸಂಸ್ಕರಣಾ ಘಟಕವನ್ನು ಆರಂಭಿಸುವ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಲಾಗುವುದು.

ಕೃಷಿ ಮತ್ತು ಪಶುಸಂಗೋಪನೆ ಕುರಿತು ರೈತರಿಗೆ ಮಹತ್ವದ ವೈಜ್ಞಾನಿಕ ಮಾಹಿತಿ ನೀಡಲು ಸ್ಥಾಪಿಸಲಾದ ಬನಾಸ್ ಸಮುದಾಯ ರೇಡಿಯೋ ಕೇಂದ್ರವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ನಂತರ ರೇಡಿಯೊ ಕೇಂದ್ರವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಈ ಆಕಾಶವಾಣಿ ಕೇಂದ್ರವು 1,700 ಗ್ರಾಮಗಳ 5 ಲಕ್ಷ ರೈತರಿಗೆ ಮಾಹಿತಿ ನೀಡಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!