April 10, 2026
Friday, April 10, 2026
spot_img

ಇಂದು ʼಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026ʼ ಉದ್ಘಾಟನೆ ಮಾಡಲಿದ್ದಾರೆ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ನರೇಂದ್ರ ಮೋದಿ ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026ಯನ್ನು ಉದ್ಘಾಟಿಸಲಿದ್ದಾರೆ.

ಬೆಳಗ್ಗೆ 9:15 ಕ್ಕೆ ಜಾಗತಿಕ ನಾಯಕರ ಜೊತೆಗೆ ಗ್ರೂಪ್ ಫೋಟೊ ತೆಗೆಸಿಕೊಳ್ಳುವ ಕಾರ್ಯಕ್ರಮ ಇದೆ. ಉದ್ಘಾಟನಾ ಸಮಾರಂಭದಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸೇರಿ ಹಲವು ಜಾಗತಿಕ ನಾಯಕರು ಭಾಷಣ ಮಾಡಲಿದ್ದಾರೆ. ಸಂಜೆ ಮೋದಿ ಸಿಇಒ ದುಂಡು ಮೇಜಿನ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಸಿಇಒಗಳು/ಸಿಎಕ್ಸ್‌ಒಗಳು ಸೇರಿದಂತೆ 500 ಕ್ಕೂ ಹೆಚ್ಚು ಜಾಗತಿಕ ಎಐ ನಾಯಕರು, ಸುಮಾರು 100 ಸಿಇಒಗಳು ಮತ್ತು ಸಂಸ್ಥಾಪಕರು, 150 ಶಿಕ್ಷಣ ತಜ್ಞರು ಮತ್ತು ಸಂಶೋಧಕರು ಮತ್ತು 400 ಸಿಟಿಒಗಳು ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದು 20 ಕ್ಕೂ ಹೆಚ್ಚು ರಾಜ್ಯ ಮತ್ತು ಸರ್ಕಾರದ ಮುಖ್ಯಸ್ಥರು ಮತ್ತು ಸುಮಾರು 60 ಮಂತ್ರಿಗಳು, ಉಪಮಂತ್ರಿಗಳು ಸೇರಿದಂತೆ 100 ಕ್ಕೂ ಹೆಚ್ಚು ಸರ್ಕಾರಿ ಪ್ರತಿನಿಧಿಗಳು ಇರಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !