ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ನಾಳೆ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಮುಂಬೈನಲ್ಲಿ ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ ಅನ್ನು ಉದ್ಘಾಟನೆ ಮಾಡಲಿದ್ದಾರೆ.
4,15,000 ಚದರ ಅಡಿಗಳಿಗೂ ಹೆಚ್ಚು ವಿಸ್ತೀರ್ಣ ಹೊಂದಿರುವ ಮುಂಬೈ ಅಂತಾರಾಷ್ಟ್ರೀಯ ಕ್ರೂಸ್ ಟರ್ಮಿನಲ್ ಅನ್ನು ವರ್ಷಕ್ಕೆ 1 ಮಿಲಿಯನ್ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ವಿನ್ಯಾಸಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಶೀಘ್ರದಲ್ಲೇ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಲಿದೆ.
ಇಂದಿರಾ ಡಾಕ್‌ನಲ್ಲಿರುವ ಈ ಅತ್ಯಾಧುನಿಕ ಸೌಲಭ್ಯವು ಭಾರತೀಯ ಕ್ರೂಸ್ ಪ್ರವಾಸೋದ್ಯಮಕ್ಕೆ ಮಹತ್ವದ ದ್ವಾರವಾಗಿ ಹೊರಹೊಮ್ಮಲಿದೆ. ಭಾರತದ ಮಹತ್ವಾಕಾಂಕ್ಷೆಯ ಬಂದರು ಅಭಿವೃದ್ಧಿ ಉಪಕ್ರಮದ ಭಾಗವಾಗಿ ನಿರ್ಮಿಸಲಾದ ಈ ಕ್ರೂಸ್ ಟರ್ಮಿನಲ್ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತದೆ.