ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಅಹ್ಮದಾಬಾದ್ ನ ಸರ್ದಾರ್ ಧಾಮ್ ಭವನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ಇದೇ ವೇಳೆ ಸರ್ದಾರ್ ಧಾಮ್ ಎರಡನೇ ಹಂತದ ಕನ್ಯಾ ಛತ್ರಾಲಯದ (ಬಾಲಕಿಯರ ಹಾಸ್ಟೆಲ್) ‘ಭೂಮಿ ಪೂಜೆ’ ನೆರವೇರಿಸಿದ್ದಾರೆ.
ಉದ್ಘಾಟನಾ ಸದಂರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಕೂಡ ಭಾಗವಹಿಸಿದ್ದರು.
ಸರ್ದಾರ್ ಧಾಮ್ ಶೈಕ್ಷಣಿಕ ಮತ್ತು ಸಾಮಾಜಿಕ ಪರಿವರ್ತನೆ, ಸಮಾಜದ ದುರ್ಬಲ ವರ್ಗಗಳ ಉನ್ನತಿ ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ಪ್ರಧಾನಮಂತ್ರಿಗಳ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.
ಛತ್ರಾಲಯದಲ್ಲಿ ಸುಮಾರು 2 ಸಾವಿರ ವಿದ್ಯಾರ್ಥಿನಿಯರ ವಸತಿಗೆ ಅನುಕೂಲವಾಗವಂತೆ ನಿರ್ಮಿಸಲಾಗಿದೆ. ಉನ್ನತ ಉದ್ಯೋಗದ ಕನಸು ಕಾಣುವ ಗ್ರಾಮೀಣ ವಿದ್ಯಾರ್ಥಿನಿಯರಿಗೆ ಈ ಹಾಸ್ಟೆಲ್ ವಸತಿ ಸೌಲಭ್ಯ ಒದಗಿಸಲಿದೆ.