Wednesday, August 10, 2022

Latest Posts

ಇಂದು ‘ಸರ್ದಾರ್ ಧಾಮ್’ ಭವನ ಉದ್ಘಾಟಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿಯವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಹ್ಮದಾಬಾದ್ ನ ಸರ್ದಾರ್ ಧಾಮ್ ಭವನವನ್ನು ಉದ್ಘಾಟಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಸರ್ದಾರ್ ಧಾಮ್ ಎರಡನೇ ಹಂತದ ಕನ್ಯಾ ಛತ್ರಾಲಯದ (ಬಾಲಕಿಯರ ಹಾಸ್ಟೆಲ್) ‘ಭೂಮಿ ಪೂಜೆ’ ನೆರವೇರಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ದಾರ್ ಧಾಮ್ ಶೈಕ್ಷಣಿಕ ಮತ್ತು ಸಾಮಾಜಿಕ ಪರಿವರ್ತನೆ, ಸಮಾಜದ ದುರ್ಬಲ ವರ್ಗಗಳ ಉನ್ನತಿ ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ.

ಕನ್ಯಾ ಛತ್ರಾಲಯದಲ್ಲಿ ಸುಮಾರು 2 ಸಾವಿರ ವಿದ್ಯಾರ್ಥಿನಿಯರ ವಸತಿಗೆ ಅನುಕೂಲವಾಗವಂತೆ ನಿರ್ಮಿಸಲಾಗಿದೆ. ಉನ್ನತ ಉದ್ಯೋಗದ ಕನಸು ಕಾಣುವ ಗ್ರಾಮೀಣ ವಿದ್ಯಾರ್ಥಿನಿಯರಿಗೆ ಈ ಹಾಸ್ಟೆಲ್ ವಸತಿ ಸೌಲಭ್ಯ ಒದಗಿಸಲಿದೆ.

ಉದ್ಘಾಟನಾ ಸದಂರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಕೂಡ ಭಾಗವಹಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss