ಲೋಕಸಭೆ, ವಿಧಾನಸಭೆ ಚುನಾವಣೆ ಗುರಿಯಾಗಿಸಿಕೊಂಡ ಪ್ರಧಾನಿ: ರಾಜಸ್ಥಾನದಲ್ಲಿ ಮೆಗಾ ಪ್ರಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾಜಸ್ಥಾನ ತಲುಪಿದ್ದಾರೆ. ಅವರ ಅಧಿಕಾರಕ್ಕೆ 9 ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕತ್ವದ ವತಿಯಿಂದ ರಾಜ್ಯದಲ್ಲಿ ಸಂಭ್ರಮಾಚರಣೆ ನಡೆಸಲು ಸಿದ್ಧತೆ ನಡೆದಿದೆ. ಈ ಕಾರ್ಯಕ್ರಮಗಳ ಅಂಗವಾಗಿ ಬಿಜೆಪಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಲಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಸೇರಿದಂತೆ ಲೋಕಸಭೆ ಚುನಾವಣೆಯನ್ನು ಗುರಿಯಾಗಿಸಿಕೊಂಡು ರಾಜಸ್ಥಾನದಲ್ಲಿ ಮೋದಿ ಮೆಗಾ ಪ್ರಚಾರ ಆರಂಭಿಸಿದ್ದಾರೆ. ಮಧ್ಯಾಹ್ನ ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಊಟ ಮಾಡಲಿದ್ದಾರೆ.

ರಾಜಸ್ಥಾನದಲ್ಲಿ ಮೋದಿ ಕಾರ್ಯಕ್ರಮ ಹೀಗಿದೆ

  • ರಾಜಸ್ಥಾನದ ಪುಷ್ಕರ್‌ನಲ್ಲಿರುವ ಬ್ರಹ್ಮ ದೇವಾಲಯದಲ್ಲಿ ಪೂಜೆ.
  • ಅಜ್ಮೀರ್‌ನಿಂದ ಮಹಾ ಜನಸಂಪರ್ಕ ಅಭಿಯಾನ ಆರಂಭ. ಇಂದಿನಿಂದ ಜೂನ್ 30ರವರೆಗೆ ನಡೆಯಲಿದೆ.
  • ಅಜ್ಮೀರ್‌ನ ಖಯಾದ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತು
  • ಲೋಕಸಭೆ ಕ್ಷೇತ್ರಗಳು ಮತ್ತು ರಾಜ್ಯಗಳಿಂದ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದ ವರದಿಗಳನ್ನು ಬಿಜೆಪಿ ಸಿದ್ಧಪಡಿಸಿದೆ.
  • 9 ವರ್ಷಗಳಲ್ಲಿ ಕೇಂದ್ರದಿಂದ ಬಂದ ಹಣವನ್ನು ಯೋಜನೆಗಳ ಕುರಿತು ವರದಿ ಮೂಲಕ ಜನರ ಮುಂದಿಡಲಾಗುವುದು.

ಕಳೆದ ಎಂಟು ತಿಂಗಳಲ್ಲಿ ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ಕೈಗೊಂಡಿರುವ ಆರನೇ ಕಾರ್ಯಕ್ರಮ ಇದಾಗಿದೆ. 8 ಲೋಕಸಭಾ ಕ್ಷೇತ್ರಗಳ 45 ವಿಧಾನಸಭಾ ಕ್ಷೇತ್ರಗಳಿಂದ ಮೋದಿ ಸಭೆಗೆ ಲಕ್ಷಾಂತರ ಜನರು, ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಬಿಜೆಪಿ ಹೇಳಿದೆ.

ಮೋದಿಯವರ 9 ವರ್ಷಗಳ ಆಡಳಿತ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ನಡೆಸಲು ಬಿಜೆಪಿ ಸಜ್ಜಾಗಿದೆ. ದೇಶಾದ್ಯಂತ 4000 ವಿಧಾನಸಭಾ ಕ್ಷೇತ್ರಗಳಲ್ಲಿ 51ಕ್ಕೂ ಹೆಚ್ಚು ಬೃಹತ್ ರ್ಯಾಲಿ, 500ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಾರ್ವಜನಿಕ ಸಭೆ, 500ಕ್ಕೂ ಹೆಚ್ಚು ಲೋಕಸಭೆ, 600 ಮಾಧ್ಯಮ ಸಭೆಗಳಿಗೆ ಬಿಜೆಪಿ ಸಿದ್ಧತೆ ನಡೆಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!