spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉತ್ತರ ಪ್ರದೇಶದ 5ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಪ್ರಧಾನಿ ಮೋದಿ ಶಂಕುಸ್ಥಾಪನೆ

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ಜೇವರ್ ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಯನ್ನು ಇಂದು ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ.
ಈ ವಿಮಾನ ನಿಲ್ದಾಣವು 1300 ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದ್ದು, 2024ರ ವೇಳೆಗೆ ವಿಮಾನ ನಿಲ್ದಾಣ ಪೂರ್ಣಪ್ರಮಾಣದಲ್ಲಿ ಸಿದ್ಧವಾಗಲಿದೆ. ಈ ವಿಮಾನ ನಿಲ್ದಾಣ ವಾರ್ಷಿಕ 1.2 ಕೋಟಿ ಪ್ರಯಾಣಿಕರಿಗೆ ಸೇವೆ ಸಲ್ಲಿಸಲಿದೆ.
10,500 ಕೋಟಿ ರೂ. ವೆಚ್ಚದಲ್ಲಿ ಈ ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿ ಕಾರ್ಯ ನಡೆಯಲಿದೆ. ಉತ್ತರ ಪ್ರದೇಶ ಐದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ದೇಶದ ಏಕೈಕ ರಾಜ್ಯವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಮೋದಿ, ಉತ್ತರ ಪ್ರದೇಶದಲ್ಲಿನ ಪ್ರವಾಸೋದ್ಯಮ, ವಾಣಿಜ್ಯ ಹಾಗೂ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸಲು ಈ ನೋಯ್ಡಾ ವಿಮಾನ ನಿಲ್ದಾಣ ಪ್ರಮುಖ ಪಾತ್ರ ವಹಿಸಲಿದೆ. ನ.25ರ ಮಧ್ಯಾಹ್ನ 1 ಗಂಟೆಗೆ ಈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆ ನೆರವೇರಲಿದೆ ಎಂದು ಬರೆದುಕೊಂಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss