Sunday, August 14, 2022

Latest Posts

ಇಂದು ಜಿ20 ಶೃಂಗಸಭೆ: ಪ್ರಧಾನಿ ಮೋದಿ ಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೋಮ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ಜಿ20 ಶೃಂಗಸಭೆಯಲ್ಲಿ ಮಾತನಾಡಲಿದ್ದಾರೆ.
ಕೊರೋನಾ ಸೋಂಕಿನಿಂದ ಸಂಕಷ್ಟದಲ್ಲಿರುವ ರಾಷ್ಟ್ರಗಳ ಆರ್ಥಿಕ ಹಾಗೂ ಆರೋಗ್ಯ ಚೇತರಿಕೆ, ಸುಸ್ಥಿರ ಅಭಿವೃದ್ಧಿ ಕುರಿತು ಚರ್ಚಿಸಲಿದ್ದಾರೆ.
ಇಂದು ನಡೆಯಲಿರುವ ಜಿ20 ಶೃಂಗ ಸಭೆಯ ನಂತರ ಪ್ರಧಾನಿ ಮೋದಿ ವ್ಯಾಟಿಕನ್ ಸಿಟಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಪೋಪ್ ಫ್ರಾನ್ಸಿಸ್ ಹಾಗೂ ವಿದೇಶಾಂಗ ಕಾರ್ಯದರ್ಶಿ ಕಾರ್ಡಿನಲ್ ಪಿಯೆಟ್ರೋ ಪರೋಲಿನ್ ರನ್ನು ಭೇಟಿಯಾಗಲಿದ್ದಾರೆ.
ಶುಕ್ರವಾರ ರೋಮ್ ಗೆ ತೆರಳಿದ ಪ್ರಧಾನಿ ಮೋದಿ ಮೊದಲಿಗೆ ಮಹಾತ್ಮಾಗಾಂಧಿ ಅವರ ಪ್ರತಿಮೆಗೆ ಗೌರವ ಸಲ್ಲಿಸಿದ್ದಾರೆ. ನಂತರ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕಲ್ ಮತ್ತು ಯೂರೋಪಿಯಬ್ ಕಮಿಷನ್ ಅಧ್ಯಕ್ಷ ಉರ್ಸುಲಾ ವಾನ್ ಡೆರ್ ಲೇಯನ್ ಜೊತೆ ಸಂವಾದ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss