spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಂಸದ್ ಟಿವಿಗೆ ಇಂದು ಪ್ರಧಾನಿ ಮೋದಿ ಚಾಲನೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಪ್ರಧಾನಿ ಮೋದಿಯವರು ಇಂದು ಹೊಸ ಚಾನೆಲ್ ಸಂಸದ್ ಟಿವಿಯನ್ನು ಉದ್ಘಾಟಿಸಲಿದ್ದಾರೆ.
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಲೋಕಸಭಾ ಟಿವಿ ಮತ್ತು ರಾಜ್ಯಸಭಾ ಟಿವಿಯನ್ನು ವಿಲೀನಗೊಳಿಸಿ ಸಂಸದ್ ಟಿವಿ ಹೆಸರಿನ ಚಾನೆಲ್ ಆರಂಭಿಸಲಾಗುತ್ತಿದೆ. ಉಭಯ ಸದನಗಳ ಕಾರ್ಯಾಚರಣೆ ಕುರಿತು ಸಂಸದ್ ಟಿವಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಿದೆ.
ಕಾಂಗ್ರೆಸ್ ಮುಖಂಡ ಕರಣ್ ಸಿಂಗ್, ಅರ್ಥಶಾಸ್ತ್ರಜ್ಞ ವಿವೇಕ್ ದೆಬರಾಯ್, ನೀತಿ ಆಯೋಗ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮಿತಾಬ್ ಕಾಂತ್ ಹಾಗೂ ಅಡ್ವೋಕೇಟ್ ಹೇಮಂತ್ ಬಾತ್ರಾ ಅವರು ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಮತ್ತು ಜವಳಿ ಸಚಿವಾಲಯದ ಕಾರ್ಯದರ್ಶಿ ರವಿ ಕಪೂರ್ ಅವರು ಸಂಸದ್ ಟಿವಿಯ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss