ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ: ಸಂಚಾರದಲ್ಲಿ ಬದಲಾವಣೆ, ಪರ್ಯಾಯ ಮಾರ್ಗ ಬಳಸಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಅವರು ನಾಳೆ ವೈಟ್ ಫಿಲ್ಡ್ – ಕೆ. ಆರ್​ ಪುರ ನಡುವಿನ ಮೆಟ್ರೋಗೆ ಹಸಿರು ನಿಶಾನೆ ತೋರಲಿದ್ದಾರೆ .

ಬಳಿಕ ವೈಟ್ ಫೀಲ್ಡ್ ನಲ್ಲಿ ಸಮೀಪ ಮಹದೇವಪುರ ಕ್ಷೇತ್ರದ ಸತ್ಯ ಸಾಯಿ ಆಶ್ರಮದಿಂದ ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ವರೆಗೂ ಸುಮಾರು 1 ಕಿ.ಮೀ. ರೋಡ್ ಶೋ ನಡೆಸಲಿದ್ದಾರೆ. ಇನ್ನು ಮೆಟ್ರೋ ಸುತ್ತಮುತ್ತ 5 ರಸ್ತೆಗಳಲ್ಲಿ ಸಂಚಾರ ನಿರ್ಬಂಧಗೊಳಿಸಲಾಗಿದೆ. ಮಾ.24ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಪೊಲೀಸ್ ಸಿಬ್ಬಂದಿಯಿಂದ ಪ್ರತಿ ಹಂತದಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಗಳಿಂದ ತಪಾಸಣೆ ಮಾಡಲಾಗುತ್ತಿದೆ. ಪ್ರಧಾನಿಗಳಿಂದ ರೋಡ್ ಶೋ ಸಾಧ್ಯತೆ ಹಿನ್ನೆಲೆ ರಸ್ತೆಯುದ್ಧಕ್ಕೂ ಬ್ಯಾರಿಕೇಡ್ ಹಾಕಿ ತಯಾರಿ ನಡೆದಿದೆ. ದಿಣ್ಣೂರ್ ಕ್ರಾಸ್ ನಿಂದ ವೈಟ್ ಫೀಲ್ಡ್ ಮೆಟ್ರೋ ನಿಲ್ದಾಣದವರೆಗೂ ರಸ್ತೆಯ ಎರಡು ಬದಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರಿಗೆ ಮೋದಿ ಸ್ವಾಗತಕ್ಕೆ ಅವಕಾಶ ನೀಡಲಾಗಿದೆ.

ನಾಳೆ ಪ್ರಧಾನಮಂತ್ರಿ ಮೋದಿ ಬೆಂಗಳೂರು ಪ್ರವಾಸ ಜೊತೆಗೆ ವೈಟ್ ಫೀಲ್ಡ್ – ಕೆ ಆರ್ ಪುರ ನಡುವಿನ ಮೆಟ್ರೋ ರೈಲಿಗೆ ಚಾಲನೆ ನೀಡಲಿರುವ ಹಿನ್ನಲೆಯಲ್ಲಿ ವೈಟ್ ಫೀಲ್ಡ್ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ತಡೆಹಿಡಿಯಲಾಗಿದೆ. ಹಾಗೂ ಕೆಲವು ಮಾರ್ಗಗಳ ಸಂಚಾರವನ್ನು ಪೊಲೀಸರು ಬದಲಾವಣೆ ಮಾಡಿದ್ದಾರೆ.

ವಾಹನ ಸಂಚಾರ ನಿರ್ಬಂಧ?

ವರ್ತೂರು ಕೋಡಿಯಿಂದ ಹೋಫ್ ಫಾರಂ ಜಂಕ್ಷನ್ ಮೂಲಕ ಕನ್ನಮಂಗಲ ಗೇಟ್ ವರೆಗೆ
ಚನ್ನಸಂದ್ರದಿಂದ ಹೋಫ್ ಫಾರಂ ಮೂಲಕ ಹೂಡಿ ಸರ್ಕಲ್ ವರೆಗೆ
ಕುಂದಲಹಳ್ಳಿ ರಸ್ತೆಯಿಂದ ವೈದೇಹಿ ಅಸ್ಪತ್ರೆ ಮೂಲಕ ಹೋಫ್ ಫಾರಂ ಜಂಕ್ಷನ್ ವರೆಗೆ ಸಂಚಾರ ನಿರ್ಬಂಧ

ಸಂಚಾರ ಮಾರ್ಪಾಡು ಮಾಡಿದ ರಸ್ತೆಗಳು:

ವರ್ತೂರುಕೋಡಿಯಿಂದ ಕುಂದಲಹಳ್ಳಿ ಬ್ರಿಡ್ಜ್ ಮೂಲಕ ಹಳೇ ಏರ್ಪೋರ್ಟ್ ರಸ್ತೆ ತಲುಪುವುದು
ಚನ್ನಸಂದ್ರ ಸರ್ಕಲ್ ನಿಂದ ನಾಗೊಂಡನಹಳ್ಳಿ, ಇಮ್ಮಡಿಹಳ್ಳಿ ಹಗದೂರು ಮೂಲಕ ವರ್ತೂರು ಕೋಡಿ ತಲುಪುವುದು
ಕಾಟಂನಲ್ಲೂರು ಕ್ರಾಸ್ ನಿಂದ ಶೀಗೆಹಳ್ಳಿ ಗೇಟ್, ಕಾಡುಗೋಡಿ ನಾಲಾರಸ್ತೆ ಮೂಲಕ ಚನ್ನಸಂದ್ರ
ಹೂಡಿ ಸರ್ಕಲ್ ನಿಂದ ಗ್ರಾಫೈಟ್ ರಸ್ತೆ ಮೂಲಕ ಕುಂದಲಹಳ್ಳಿ ತಲುಪುವುದು
ಹೂಡಿ ಸರ್ಕಲ್ ನಿಂದ ಅಯ್ಯಪ್ಪನಗರ, ಭಟ್ಟರಹಳ್ಳಿ-ಮೇಡಹಳ್ಳಿ ಮೂಲಕ ಕಾಟಂನಲ್ಲೂರು ಕ್ರಾಸ್ ತಲುಪುವುದು.

ಐದು ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರ ಕೂಡ ನಿರ್ಬಂಧ

ಕಾಟಂನಲ್ಲೂರು ಕ್ರಾಸ್ ನಿಂದ ಕಾಡುಗೋಡಿ, ಹೋಫ್ ಫಾರಂ ಜಂಕ್ಷನ್- ವರ್ತೂರು ಕೋಡಿವರೆಗೆ
ಗುಂಜೂರುನಿಂದ ವರ್ತೂರು, ವೈಟ್ ಫೀಲ್ಡ್, ಕಾಡುಗೋಡಿ, ಕಾಟಂನಲ್ಲೂರು ಕ್ರಾಸ್ ವರೆಗೆ.
ತಿರುಮಲಶೆಟ್ಟಿಹಳ್ಳಿ ಕ್ರಾಸ್ ನಿಂದ ಚನ್ನಸಂದ್ರ, ಹೋಫ್ ಫಾರಂ ಜಂಕ್ಷನ್ ವರೆಗೆ
ಟಿನ್ ಪ್ಯಾಕ್ಟರಿಯಿಂದ ಹೂಡಿ, ಐಟಿಪಿಎಲ್, ಹೋಫ್ ಫಾರಂ ಜಂಕ್ಷನ್ ವರೆಗೆ.
ಮಾರತ್ತಹಳ್ಳಿ ಬ್ರಿಡ್ಜ್ ನಿಂದ ಕುಂದಲಹಳ್ಳಿ, ವರ್ತೂರು ಕೋಡಿ, ವೈಟ್ ಫೀಲ್ಡ್ ವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧ.

ಭಾರಿ ವಾಹನಗಳ ಸಂಚಾರ ಮಾರ್ಪಾಡು

ಹೊಸಕೋಟೆಯಿಂದ ದೊಡ್ಡಗಟ್ಟಿಗನಬ್ಬೆ, ತಿರುಮಲಶೆಟ್ಟಿಹಳ್ಳಿ, ಚಿಕ್ಕತಿರುಪತಿ ಮೂಲಕ ಸರ್ಜಾಪುರ ತಲುಪುವುದು
ಸರ್ಜಾಪುರದಿಂದ ಗುಂಜೂರು, ನೆರಿಗೆರಸ್ತೆ, ತಿರುಮಲಶೆಟ್ಟಿಹಳ್ಳಿ ಮೂಲಕ ಹೊಸಕೋಟೆ
ಟಿನ್ ಫ್ಯಾಕ್ಟರಿಯಿಂದ ಕೆ ಆರ್ ಪುರ, ಭಟ್ಟರಹಳ್ಳಿ ಮೂಲಕ ಹೊಸಕೋಟೆ.
ಮಾರತ್ತಹಳ್ಳಿಯಿಂದ ದೊಡ್ಡನೆಕ್ಕುಂದಿ ಮಹದೇವಪುರ ಟಿನ್ ಫ್ಯಾಕ್ಟರಿ ಮೂಲಕ ಭಟ್ಟರಹಳ್ಳಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!