ಇಂದು ಪ್ರಧಾನಿ ಮೋದಿ ತ್ರಿಪುರಾ, ಮೇಘಾಲಯ ಭೇಟಿ: 6,800 ಕೋಟಿ ರೂ. ಯೋಜನೆಗಳ ಉದ್ಘಾಟನೆ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮೇಘಾಲಯ ಮತ್ತು ತ್ರಿಪುರಾಕ್ಕೆ ಭೇಟಿ ನೀಡಲಿದ್ದು, 6,800 ಕೋಟಿ ರೂಪಾಯಿಗಳ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ. ವಸತಿ, ರಸ್ತೆ, ಕೃಷಿ, ದೂರಸಂಪರ್ಕ, ಐಟಿ, ಪ್ರವಾಸೋದ್ಯಮ ಮತ್ತು ಆತಿಥ್ಯ ಸೇರಿದಂತೆ ವ್ಯಾಪಕ ಶ್ರೇಣಿಯ ಕ್ಷೇತ್ರಗಳನ್ನು ಒಳಗೊಂಡಿವೆ.

ಶಿಲ್ಲಾಂಗ್‌ನಲ್ಲಿ ಪ್ರಧಾನಿ ಈಶಾನ್ಯ ಮಂಡಳಿಯ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ.  ಈಶಾನ್ಯ ಪ್ರದೇಶದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯಲ್ಲಿ NEC ಪ್ರಮುಖ ಪಾತ್ರ ವಹಿಸಿದೆ. ಇದು ಮೌಲ್ಯಯುತವಾದ ಬಂಡವಾಳ ಮತ್ತು ಸಾಮಾಜಿಕ ಮೂಲಸೌಕರ್ಯವನ್ನು ರಚಿಸಲು ಸಹಾಯ ಮಾಡಿದೆ, ವಿಶೇಷವಾಗಿ ಶಿಕ್ಷಣ, ಆರೋಗ್ಯ, ಕ್ರೀಡೆ, ಜಲಸಂಪನ್ಮೂಲಗಳು, ಕೃಷಿ, ಪ್ರವಾಸೋದ್ಯಮ, ಕೈಗಾರಿಕೆ ಸೇರಿದಂತೆ ಕ್ಷೇತ್ರಗಳ ನಿರ್ಣಾಯಕ ಪಾತ್ರ ವಹಿಸಿದೆ.

ಬೆಳಗ್ಗೆ 10:30ರ ಸುಮಾರಿಗೆ ಶಿಲ್ಲಾಂಗ್‌ನ ಸ್ಟೇಟ್ ಕನ್ವೆನ್ಷನ್ ಸೆಂಟರ್‌ನಲ್ಲಿ ಈಶಾನ್ಯ ಕೌನ್ಸಿಲ್‌ನ ಸಭೆಯಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.
ನಂತರದ ಸಾರ್ವಜನಿಕ ಸಮಾರಂಭದಲ್ಲಿ, ಪ್ರಧಾನಮಂತ್ರಿ ಅವರು 2450 ಕೋಟಿ ರೂಪಾಯಿಗಳ ಬಹುವಿಧದ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.

ಈ ಪ್ರದೇಶದಲ್ಲಿ ಟೆಲಿಕಾಂ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುವ ಒಂದು ಹಂತದಲ್ಲಿ, ಪ್ರಧಾನಮಂತ್ರಿ ಅವರು 4G ಮೊಬೈಲ್ ಟವರ್‌ಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಉಮ್ಸಾವ್ಲಿಯಲ್ಲಿ ಐಐಎಂ ಶಿಲ್ಲಾಂಗ್‌ನ ಹೊಸ ಕ್ಯಾಂಪಸ್, ಶಿಲ್ಲಾಂಗ್-ಡಿಯೆಂಗ್‌ಪಾಸೋಹ್ ರಸ್ತೆಯನ್ನು ಸಹ ಉದ್ಘಾಟಿಸಲಿದ್ದಾರೆ.

ಮೇಘಾಲಯ, ಮಣಿಪುರ ಮತ್ತು ಅರುಣಾಚಲ ಪ್ರದೇಶ – ಮೂರು ರಾಜ್ಯಗಳಾದ್ಯಂತ ನಾಲ್ಕು ಇತರ ರಸ್ತೆ ಯೋಜನೆಗಳನ್ನು ಮೋದಿ ಉದ್ಘಾಟಿಸಲಿದ್ದಾರೆ. ಮಶ್ರೂಮ್ ಉತ್ಪಾದನೆಯನ್ನು ಹೆಚ್ಚಿಸಲು ರೈತರಿಗೆ ಮತ್ತು ಉದ್ಯಮಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಲು ಮೇಘಾಲಯದ ಅಣಬೆ ಅಭಿವೃದ್ಧಿ ಕೇಂದ್ರದಲ್ಲಿ ಸ್ಪಾನ್ ಪ್ರಯೋಗಾಲಯವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ಮಿಜೋರಾಂ, ಮಣಿಪುರ, ತ್ರಿಪುರಾ ಮತ್ತು ಅಸ್ಸಾಂನಲ್ಲಿ 21 ಹಿಂದಿ ಗ್ರಂಥಾಲಯಗಳು, ಅಸ್ಸಾಂ, ಮೇಘಾಲಯ, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಾದ್ಯಂತ ಆರು ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ, ತುರಾ ಮತ್ತು ಶಿಲ್ಲಾಂಗ್ ಟೆಕ್ನಾಲಜಿ ಪಾರ್ಕ್ ಹಂತ-II ನಲ್ಲಿ ಇಂಟಿಗ್ರೇಟೆಡ್ ಹಾಸ್ಪಿಟಾಲಿಟಿ ಮತ್ತು ಕನ್ವೆನ್ಷನ್ ಸೆಂಟರ್‌ನ ಅಡಿಪಾಯವನ್ನು ಹಾಕಲಿದ್ದಾರೆ.

ಮಧ್ಯಾಹ್ನ 2:45 ರ ಸುಮಾರಿಗೆ ಅಗರ್ತಲಾದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ 4350 ಕೋಟಿರೂ.ಗೂ ಹೆಚ್ಚು ಮೌಲ್ಯದ ವಿವಿಧ ಪ್ರಮುಖ ಉಪಕ್ರಮಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಗ್ರಾಮೀಣ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಗೃಹ ಪ್ರವೇಶ ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದಾರೆ. 3400 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಈ ಮನೆಗಳು 2 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳನ್ನು ಒಳಗೊಳ್ಳಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!