November 12, 2026
Thursday, November 12, 2026
spot_img

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ : ಹೈ ರಿಸ್ಕ್ ಅಪಾರ್ಟ್‌ಮೆಂಟ್‌ಗಳಲ್ಲಿ ಪೊಲೀಸ್ ತಪಾಸಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಆಗಮಿಸಿದ್ದು, ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ ಸಂಚರಿಸುವ ಮಾರ್ಗಗಳು,ಮೆಟ್ರೋ ಹಾಗೂ ಕಾರ್ಯಕ್ರಮ ನಡೆಯುವ ವೇದಿಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಆಗದಂತೆ ವಿಶೇಷ ನಿಗಾ ಇರಿಸಲಾಗಿದೆ.

ಪ್ರಧಾನಿ ಭೇಟಿಗೆ ಸುಮಾರು 10 ದಿನಗಳ ಮೊದಲೇ ಬೆಂಗಳೂರಿಗೆ ಆಗಮಿಸಿರುವ ವಿಶೇಷ ರಕ್ಷಣಾ ಪಡೆ ತಂಡ, ಮೋದಿ ಸಂಚರಿಸಲಿರುವ ರಸ್ತೆ ಮಾರ್ಗಗಳು, ಮೆಟ್ರೋ ಪ್ರಯಾಣದ ವ್ಯವಸ್ಥೆ ಹಾಗೂ ಕಾರ್ಯಕ್ರಮದ ಸ್ಥಳಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದೆ. ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ನಿಗಾ ವಹಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಧಾನಿ ಮೋದಿ ಸಂಚರಿಸುವ ಮಾರ್ಗಗಳಲ್ಲಿರುವ ಬೃಹತ್‌ ಕಟ್ಟಡಗಳ ಮೇಲೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇನ್ನು ಹೈ ರಿಸ್ಕ್‌ ಇರುವ ಅಪಾರ್ಟ್‌ಮೆಂಟ್‌ಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಮಯದಲ್ಲಿ ಹೊಸತಾಗಿ ಯಾರೇ ಅಪಾರ್ಟ್‌ಮೆಂಟ್‌ಗೆ ಶಿಫ್ಟ್‌ ಆದರೂ ಮಾಹಿತಿ ನೀಡಬೇಕು ಎಂದು ನಿವಾಸಿಗಳಿಗೆ ಸೂಚನೆ ನೀಡಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ನೇತೃತ್ವದಲ್ಲಿ ಪ್ರಧಾನಿ ಭದ್ರತೆಗೆ ವ್ಯಾಪಕ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಮೂವರು ಜಂಟಿ ಪೊಲೀಸ್ ಆಯುಕ್ತರು, 15 ಡಿಸಿಪಿಗಳು, 20 ಎಸಿಪಿಗಳು, 30 ಇನ್‌ಸ್ಪೆಕ್ಟರ್‌ಗಳು, 100ಕ್ಕೂ ಹೆಚ್ಚು ಸಬ್‌ಇನ್‌ಸ್ಪೆಕ್ಟರ್‌ಗಳು ಹಾಗೂ 1,000ಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಿಬ್ಬಂದಿಯನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

Must Read