Sunday, June 26, 2022

Latest Posts

ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿಗೆ ಕ್ಯಾತೆ ತೆಗೆದ ಪಾಕ್ ಗೆ ತಿರುಗೇಟು ನೀಡಿದ ಭಾರತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇತ್ತೀಚೆಗೆ ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಕ್ಯಾತೆ ತೆಗೆದಿದೆ.ಇದಕ್ಕೆ ಭಾರತ ತಕ್ಕ ಪ್ರತಿಕ್ರಿಯೆ ನೀಡಿದೆ. ಸುದ್ದಿಗೋಷ್ಠಿಯೊಂದರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ತಿರುಗೇಟು ನೀಡಿದೆ.
ಪ್ರಧಾನಿ ಮೋದಿಗೆ ಜಮ್ಮು-ಕಾಶ್ಮೀರದಲ್ಲಿ ಸಿಕ್ಕ ಅದ್ಧೂರಿ ಸ್ವಾಗತ ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಆಗಿರುವ ಬದಲಾವಣೆಗಳ ಮೂಲಕ ನಿಮ್ಮ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಸಿಕ್ಕಿದೆ . ಯಾವುದೇ ಸಂದರ್ಭದಲ್ಲಿ ಪಾಕಿಸ್ತಾನ ಅದರದೇ ಆದ ದೃಷ್ಟಿಕೋನದಿಂದ ಮಾತನಾಡಲು ಅಧಿಕಾರವಿಲ್ಲ ಎಂದಿದ್ದಾರೆ.
ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯಲ್ಲಿ ಭಾಗವಹಿಸಲು ಭಾನುವಾರ ಜಮ್ಮು ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದರು. ದೇಶಾದ್ಯಂತ ಎಲ್ಲಾ ಗ್ರಾಮ ಸಭೆಗಳನ್ನು ಉದ್ದೇಶಿಸಿ ಇದೇ ವೇಳೆ ಪ್ರಧಾನಿ ಮೋದಿ ಮಾತನಾಡಿದ್ದರು. ಇಷ್ಟೇ ಅಲ್ಲ, ಜಮ್ಮು ಕಾಶ್ಮೀರದಲ್ಲಿ 20 ಸಾವಿರ ಕೋಟಿ ರೂಪಾಯಿಗಳ ಮೊತ್ತದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದ್ದರು. ಸಂವಿಧಾನದ 370ನೇ ವಿಧಿ ರದ್ದಾದ ನಂತರ ಜಮ್ಮು ಕಾಶ್ಮೀರಕ್ಕೆ ಪ್ರಧಾನಿ ಅವರ ಮೊದಲ ಪ್ರಮುಖ ಭೇಟಿ ಇದಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss