ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರಕ್ಕೆ ನಾಳೆ ಪ್ರಧಾನಿ ಮೋದಿಭೇಟಿ ನೀಡಲಿದ್ದಾರೆ. ₹1,200 ಕೋಟಿಗೂ ಅಧಿಕ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ₹7,300 ಕೋಟಿ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ನಡೆಸಲಿದ್ದಾರೆ.
ಶುಕ್ರವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಮಣಿಪುರದ ಮುಖ್ಯ ಕಾರ್ಯದರ್ಶಿ ಪುನೀತ್ ಕುಮಾರ್ ಗೋಯೆಲ್, ಪ್ರಧಾನಿ ಮೋದಿ ಅವರು ಮಧ್ಯಾಹ್ನ 12.30 ರ ಸುಮಾರಿಗೆ ಮಿಜೋರಾಂನ ಐಜ್ವಾಲ್‌ನಿಂದ ಚುರಚಂದ್‌ಪುರ ಜಿಲ್ಲೆಗೆ ಆಗಮಿಸಲಿದ್ದಾರೆ, ಮೈತೈ ಮತ್ತು ಕುಕಿ ಸಮುದಾಯಗಳ ನಡುವಿನ ಹಿಂಸಾಚಾರದಿಂದ ಸ್ಥಳಾಂತರಗೊಂಡ ಜನರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ನಾಳೆ ಮಣಿಪುರದಲ್ಲಿ, ರಾಜ್ಯಾದ್ಯಂತ ಕೈಗೆತ್ತಿಕೊಳ್ಳಲಾಗುವ 7,300 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ ಮತ್ತು ಶಾಂತಿ ಮೈದಾನದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅವರು ಹೇಳಿದರು.
ಚುರಚಂದಪುರದಿಂದ ಪ್ರಧಾನಿಯವರು ಮಧ್ಯಾಹ್ನ 2.30 ರ ಸುಮಾರಿಗೆ ರಾಜ್ಯದ ರಾಜಧಾನಿ ಇಂಫಾಲ್‌ಗೆ ಪ್ರಯಾಣ ಬೆಳೆಸಲಿದ್ದಾರೆ, ಅಲ್ಲಿ ಅವರು 1,200 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಚುರಚಂದಪುರ ಕುಕಿ ಪ್ರಾಬಲ್ಯ ಹೊಂದಿದ್ದರೆ, ಮೈತೇಯಿಗಳು ಬಹುಮತದಲ್ಲಿದ್ದಾರೆ. ಗೌರವಾನ್ವಿತ ಪ್ರಧಾನ ಮಂತ್ರಿಯವರ ಭೇಟಿಯು ರಾಜ್ಯದಲ್ಲಿ ಶಾಂತಿ, ಸಹಜತೆ ಮತ್ತು ವೇಗವರ್ಧಿತ ಬೆಳವಣಿಗೆಗೆ ದಾರಿ ಮಾಡಿಕೊಡುತ್ತದೆ. ರಾಜ್ಯ ಸರ್ಕಾರ ಮತ್ತು ಭಾರತ ಸರ್ಕಾರದ ಪರವಾಗಿ, ಮಣಿಪುರದ ಜನರು ಪ್ರಧಾನಿಯನ್ನು ರಾಜ್ಯಕ್ಕೆ ಸ್ವಾಗತಿಸಲು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮುಂದೆ ಬರಬೇಕೆಂದು ನಾನು ವಿನಂತಿಸುತ್ತೇನೆ ಎಂದು ಗೋಯಲ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯನ್ನು ನಾನು ಕೇವಲ ಸಾಂಕೇತಿಕವಾಗಿ ಪರಿಗಣಿಸುತ್ತೇನೆ. ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿರುವ ಆಂತರಿಕವಾಗಿ ಸ್ಥಳಾಂತರಗೊಂಡ ವ್ಯಕ್ತಿಗಳು ಸೇರಿದಂತೆ ತಿಂಗಳುಗಳಿಂದ ಬಳಲುತ್ತಿರುವ ಜನರು ಶಾಂತಿ, ಪುನರ್ವಸತಿ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ಭಾಷಣ ಮಾಡಿದರೆ ಪರಿಹಾರ ಸಿಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಭದ್ರತಾ ಸಿದ್ಧತೆ
ಮೋದಿ ಭೇಟಿಗಾಗಿ ಇಂಫಾಲ್‌ನ ಕಾಂಗ್ಲಾ ಕೋಟೆ ಮತ್ತು ಚುರಾಚಾಂದ್‌ಪುರದ ಪೀಸ್ ಗ್ರೌಂಡ್‌ನಲ್ಲಿ ವಿಶೇಷ ತಯಾರಿ ನಡೆಯುತ್ತಿದೆ. ಈ ಸ್ಥಳಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ದೊಡ್ಡ ಪರದೆಗಳ ಮೂಲಕ ಕಾರ್ಯಕ್ರಮವನ್ನು ವಿಶಾಲ ಪ್ರೇಕ್ಷಕರಿಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ. ಸ್ಪಿಯರ್ ಕಾರ್ಪ್ಸ್‌ನ ಲೆಫ್ಟಿನೆಂಟ್ ಜನರಲ್ ಅಭಿಜಿತ್ ಎಸ್. ಪೆಂಧಾರ್ಕರ್ ಕಾಂಗ್‌ಪೋಕ್ಪಿ ಜಿಲ್ಲೆಯ ಮಾಫಿಟೆಲ್ ರಿಡ್ಜ್ ಮತ್ತು ಮಾಫೌ ಡ್ಯಾಂನಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ವಿಮರ್ಶೆ ನಡೆಸಿದ್ದಾರೆ. ಯಾವುದೇ ಸವಾಲನ್ನು ಎದುರಿಸಲು ಸಜ್ಜಾಗಿರುವಂತೆ ಸೈನಿಕರಿಗೆ ಸೂಚನೆ ನೀಡಿದ್ದಾರೆ.