ಮೇಘಾಲಯಕ್ಕೆ ಪ್ರಧಾನಿ ಮೋದಿ ಭೇಟಿ: ಶಿಲ್ಲಾಂಗ್‌ನಲ್ಲಿ ರೋಡ್‌ ಶೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೇಘಾಲಯಕ್ಕೆ ಭೇಟಿ ನೀಡಲಿದ್ದು, ಶಿಲ್ಲಾಂಗ್‌ನ ರೋಡ್‌ಶೋನಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಶಿಲ್ಲಾಂಗ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ .

ರೋಡ್‌ಶೋ ಸೆಂಟ್ರಲ್ ಲೈಬ್ರರಿಯಲ್ಲಿ ಪ್ರಾರಂಭವಾಗಿ ಪೊಲೀಸ್ ಬಜಾರ್‌ನಲ್ಲಿ ಕೊನೆಗೊಳ್ಳಲಿದ್ದು ಅಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ. ಶಿಲ್ಲಾಂಗ್‌ನ ರೋಡ್‌ಶೋ ಮತ್ತು ಪೊಲೀಸ್ ಬಜಾರ್ ಪಾಯಿಂಟ್‌ನ ಮಾರ್ಗದಲ್ಲಿ ಮೇಘಾಲಯ ಪೊಲೀಸರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಸೇರಿದಂತೆ 1,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪ್ರಧಾನಿ ಮೋದಿ ಅವರು ರಾಜ್ಯದ ಮೂವರು ಸ್ವಾತಂತ್ರ್ಯ ಹೋರಾಟಗಾರರಾದ ಯು ಟಿರೋಟ್ ಸಿಂಗ್, ಯು ಕಿಯಾಂಗ್ ನಂಗ್ಬಾ ಮತ್ತು ಪಾ ಟೋಗನ್ ಸಂಗ್ಮಾ ಅವರಿಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ಬಳಿಕ ಗರೋ ಹಿಲ್ಸ್‌ನ ಅಲೋಟ್ಗ್ರೆ ಸ್ಟೇಡಿಯಂನಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮೇಘಾಲಯ ವಿಧಾನಸಭಾ ಚುನಾವಣೆ ಫೆಬ್ರವರಿ 27 ರಂದು ನಡೆಯಲಿದ್ದು, ಮಾರ್ಚ್ 2 ರಂದು ಮತ ಎಣಿಕೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!