ರಾಷ್ಟ್ರೀಯ ಯುವ ದಿನ: ಜ.12ರಂದು ಪುದುಚೆರಿಗೆ ಪ್ರಧಾನಿ ಮೋದಿ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರೀಯ ಯುವ ದಿನದ ಅಂಗವಾಗಿ ಪ್ರಧಾನಿ ಮೋದಿ ಜ.12ರಂದು ಪುದುಚೆರಿಗೆ ಭೇಟಿ ನೀಡಲಿದ್ದಾರೆ.
ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಬುಧವಾರ ಪುದುಚೇರಿಗೆ ಭೇಟಿ ನೀಡುತ್ತಿದ್ದು, ಪಾಂಡಿಚೇರಿ ವಿಶ್ವವಿದ್ಯಾಲಯದಲ್ಲಿ ಉದ್ಘಾಟನಾ ಸಮಾರಂಭದ ವ್ಯವಸ್ಥೆಗಳನ್ನು ಪರಿಶೀಲಿಸುತ್ತಿದ್ದಾರೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಮೋದಿ ಸಾಮಿ ಪಿಳ್ಳೈತೋಟ್ಟಂನಲ್ಲಿ ಕಾಮರಾಜರ್ ಮಣಿ ಮಂಟಪದ ಉದ್ಘಾಟನೆ ಮಾಡಲಿದ್ದಾರೆ.
ಜ.12ರಂದು ಬೆಳಗ್ಗೆ 9:30ಕ್ಕೆ ಪ್ರಧಾನಿ ಮೋದಿ ಪುದುಚೆರಿಗೆ ಆಗಮಿಸಲಿದ್ದು, ನಂತರ ಶ್ರೀ ಅರಬಿಂದೋ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ
ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೆರಿಯಲ್ಲಿ ಈಗಾಗಲೇ ಮಕ್ಕಳ ಲಸಿಕಾ ಅಭಿಯಾನ ನಡೆಯುತ್ತಿದ್ದು, ಈವರೆಗೆ 454 ಮಕ್ಕಳು ಕೋವಿಡ್‌ ಲಸಿಕೆ ಪಡೆದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!