ಜು.8 ರಂದು ಪ್ರಧಾನಿ ಮೋದಿ ರಷ್ಯಾ ಪ್ರವಾಸ: ಪುಟಿನ್ ಜೊತೆ ದ್ವಿಪಕ್ಷೀಯ ಮಾತುಕತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪ್ರಧಾನಿ ನರೇಂದ್ರ ಮೋದಿ ಅವರು ಜು.8ರಂದು ರಷ್ಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಭೇಟಿ ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಗೊಳಿಸಲಿದೆ. ಈ ಭೇಟಿ ವೇಳೆ ಉಭಯ ರಾಷ್ಟಗಳು ರಕ್ಷಣೆ, ಅನಿಲ ಮತ್ತು ಇತರೆ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದೆ.

ಪ್ರಧಾನಿ ಮೋದಿ ಇತ್ತೀಚೆಗೆ ಇಟಲಿಯಲ್ಲಿ ಆಯೋಜಿಸಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಇದರ ಬಳಿಕ ರಷ್ಯಾ ಪ್ರವಾಸ ಮಹತ್ವ ಪಡೆದುಕೊಂಡಿದೆ.

ಈಗಾಗಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿತ್‌ ಪುಟಿನ್‌ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ಅವರನ್ನು ಹಲವು ಸಂದರ್ಭಗಳಲ್ಲಿ ಭೇಟಿಯಾಗಿದ್ದರು. ಇದೀಗ ಪ್ರಧಾನಿ ಮೋದಿ ರಷ್ಯಾ ಭೇಟಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಮತ್ತಷ್ಟು ವೃದ್ಧಿಗೊಳಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!