ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸುಮಾರು 27,000 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಜೊತೆಗೆ ನಾಗರ್ನಾರ್‌ನಲ್ಲಿರುವ ಎನ್‌ಎಂಡಿಸಿ ಸ್ಟೀಲ್ ಲಿಮಿಟೆಡ್‌ನ ಉಕ್ಕು ಸ್ಥಾವರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಅವರು ರಾಜ್ಯದ ಬಸ್ತಾರ್ ಪ್ರದೇಶದ ದಂತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
23,800 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ನಾಗಾರ್ನಾರ್‌ನಲ್ಲಿ ಉಕ್ಕಿನ ಕಾರ್ಖಾನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಉಕ್ಕಿನ ಸ್ಥಾವರವು ಗ್ರೀನ್‌ಫೀಲ್ಡ್ ಯೋಜನೆಯಾಗಿದ್ದು ಅದು ಉತ್ತಮ ಗುಣಮಟ್ಟದ ಉಕ್ಕನ್ನು ಉತ್ಪಾದಿಸುತ್ತದೆ. ಬಳಿಕ ಮಾತನಾಡಿದ ಪ್ರಧಾನಿ..ʻದೇಶದ ಮೂಲೆ ಮೂಲೆಯೂ ಅಭಿವೃದ್ಧಿಯಾದಾಗ ಮಾತ್ರ ಅಭಿವೃದ್ಧಿ ಹೊಂದಿದ ಭಾರತದ ಕನಸು ಈಡೇರುತ್ತದೆʼ ಎಂದರು.
ನಾಗರ್ನಾರ್‌ನಲ್ಲಿರುವ NMDC ಸ್ಟೀಲ್ ಲಿಮಿಟೆಡ್‌ನ ಸ್ಟೀಲ್ ಪ್ಲಾಂಟ್ ಸಾವಿರಾರು ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿರೀಕ್ಷೆಯಿದೆ. ಇದು ಬಸ್ತಾರ್ ಪ್ರದೇಶವನ್ನು ವಿಶ್ವದ ಉಕ್ಕಿನ ನಕ್ಷೆಯಲ್ಲಿ ಇರಿಸುವುದಲ್ಲದೆ, ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುತ್ತದೆ.
ಇದರ ಜೊತೆಗೆ ಅಂತಗಢ ಮತ್ತು ತರೋಕಿ ಜಗದಲ್‌ಪುರ ಮತ್ತು ದಾಂತೇವಾರ ನಡುವಿನ ರೈಲು ಮಾರ್ಗವನ್ನು ದ್ವಿಗುಣಗೊಳಿಸುವ ಯೋಜನೆಯನ್ನು ಲೋಕಾರ್ಪಣೆ ಮಾಡಿದರು. ಈ ರೈಲು ಯೋಜನೆಗಳು ಛತ್ತೀಸ್‌ಗಢದ ಬುಡಕಟ್ಟು ಪ್ರದೇಶಗಳಲ್ಲಿ ಸಂಪರ್ಕವನ್ನು ಸುಧಾರಿಸುತ್ತದೆ. ಸುಧಾರಿತ ರೈಲು ಮೂಲಸೌಕರ್ಯ ಮತ್ತು ಹೊಸ ರೈಲು ಸೇವೆಯು ಸ್ಥಳೀಯ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಸಹಾಯ ಮಾಡುತ್ತದೆ.
ರಾಷ್ಟ್ರೀಯ ಹೆದ್ದಾರಿ-43 ರ ಕುಂಕೂರಿಯಿಂದ ಛತ್ತೀಸ್‌ಗಢ – ಜಾರ್ಖಂಡ್ ಗಡಿ ಭಾಗದವರೆಗೆ ರಸ್ತೆ ನವೀಕರಣ ಯೋಜನೆಯನ್ನು ಸಹ ಪ್ರಧಾನಿ ಲೋಕಾರ್ಪಣೆ ಮಾಡಿದರು.
ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಛತ್ತೀಸ್‌ಗಢವೂ ಸೇರಿದೆ. 2018ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯಲು ಬಿಜೆಪಿ ಹವಣಿಸುತ್ತಿದೆ.