ಪ್ರಧಾನಿ ಮೋದಿ ಭೇಟಿ: ಕಲಬುರಗಿ ವಿಮಾನ ನಿಲ್ದಾಣ ಸುತ್ತ ಡ್ರೋನ್ ಕ್ಯಾಮರಾ ಹಾರಾಟ ನಿಷೇಧ

ಹೊಸದಿಗಂತ ವರದಿ,ಕಲಬುರಗಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಜನವರಿ ಜನವರಿ 19 ರಂದು ಕಲಬುರಗಿ ಜಿಲ್ಲೆಯ ಮೂಲಕ ನೆರೆಯ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪೂರ ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಜನವರಿ 19ರ ಬೆಳಿಗ್ಗೆ 6 ಗಂಟೆಯಿಂದ ಸಾಯಂಕಾಲ 6 ಗಂಟೆಯ ವರೆಗೆ ಕಲಬುರಗಿ ವಿಮಾನ ನಿಲ್ದಾಣ ಹಾಗೂ ಸುತ್ತ ಮುತ್ತಲಿನ 10 ಕಿ.ಮೀ ಪ್ರದೇಶದಲ್ಲಿ ಸಿ.ಆರ್.ಪಿ.ಸಿ ಸೆಕ್ಷನ್-144ರಂತೆ ಯಾವುದೇ ಡೋನ್ ಕ್ಯಾಮೆರಾ ಉಪಯೋಗಿಸದಂತೆ ಮತ್ತು ಹಾರಿಸದಂತೆ ನಿಷೇಧಾಜ್ಞೆ ಜಾರಿಗೊಳಿಸಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಬುಧವಾರ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!