ಇಂದು ಗುಜರಾತ್‌ನ ಮೊರ್ಬಿಗೆ ಪ್ರಧಾನಿ ಮೋದಿ ಭೇಟಿ, ನಾಳೆ ಶೋಕಾಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಹಮದಾಬಾದ್‌ನಲ್ಲಿ ತೂಗು ಸೇತುವೆ ಮುರಿದು 134 ಮಂದಿ ಮೃತಪಟ್ಟಿದ್ದಾರೆ. ಇಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಪ್ರಧಾನಿ ಮೋದಿ ಇಂದು ಗುಜರಾತ್‌ನ ಮೋರ್ಬಿಗೆ ಭೇಟಿ ನೀಡಲಿದ್ದಾರೆ.

ರಾಜ್ಯ ಸರ್ಕಾರ ನವೆಂಬರ್ ೨ರಂದು ಶೋಕಾಚರಣೆ ಘೋಷಿಸಿದೆ. ನಿನ್ನೆ ಪ್ರಧಾನಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆದಿದ್ದು, ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಹಾರಿಸುವ ಹಾಗೂ ಯಾವುದೇ ಅಧಿಕೃತ ಕಾರ್ಯಕ್ರಮ ನಡೆಸದಿರಲು ತೀರ್ಮಾನಿಸಲಾಗಿದೆ. ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಾಂತ್ವನ ಹೇಳಲಿದ್ದಾರೆ.

ಈವರೆಗೂ ಅವಘಡದಲ್ಲಿ 170 ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಕೇವಲ 150 ರಿಂದ 200 ಜನರ ಸಾಮರ್ಥ್ಯ ಇರುವ ಸೇತುವೆ ಮೇಲೆ ತೆರಳಲು ಬರೋಬ್ಬರಿ 650 ಜನರಿಗೆ ಟಿಕೆಟ್ ನೀಡಲಾಗಿತ್ತು. ಇದು ದುರಂತಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!