ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ, ವಿಶೇಷ ಪೂಜೆ, ಭರ್ಜರಿ ರೋಡ್ ಶೋ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ರಾಮಲಲ್ಲಾ ದರ್ಶನದ ನಂತರ ಅವರು ರೋಡ್ ಶೋ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಅಯೋಧ್ಯೆಯಲ್ಲಿ 2 ಕಿ.ಮೀ ರೋಡ್ ಶೋ ನಡೆಯಲಿದ್ದು, ಸದ್ಯಕ್ಕೆ ಸಿದ್ಧತೆ ನಡೆಯುತ್ತಿದೆ. ವಿಶೇಷ ಪೂಜೆಯ ನಂತರ ರೋಡ್‌ಶೋ ಪ್ರಾರಂಭವಾಗುತ್ತದೆ.

ಮೂರನೇ ಹಂತದ ಲೋಕಸಭೆ ಚುನಾವಣೆಗೆ ಮುನ್ನ ಅವರು ಇಟಾವಾ ಮತ್ತು ಧೌರಾಹರಾದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ಬಳಿಕ ಮೋದಿ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದು, ಮೊದಲು ಅಲ್ಲಿ ಮೆಗಾ ರೋಡ್ ಶೋ ನಡೆಸಲಿದ್ದಾರೆ.

ರಾತ್ರಿ 7 ಗಂಟೆಗೆ, ಪ್ರಧಾನಿ ಅವರು ಈ ವರ್ಷದ ಜನವರಿಯಲ್ಲಿ ಉದ್ಘಾಟಿಸಿದ ಅಯೋಧ್ಯೆಯ ರಾಮ ಮಂದಿರದಲ್ಲಿ ಪೂಜೆ ಮತ್ತು ದರ್ಶನ ಪಡೆಯಲಿದ್ದಾರೆ. ರಾತ್ರಿ 7:15 ರ ಸುಮಾರಿಗೆ, ಮೋದಿ ನಗರದಲ್ಲಿ ಮೆಗಾ ರೋಡ್‌ಶೋ ನಡೆಸಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!