Tuesday, September 9, 2025

ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ: 1,500 ಕೋಟಿ ರೂ. ನೆರವು ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರವಾಹ ಮತ್ತು ಭೂಕುಸಿತಗಳಿಂದ ಹಾನಿಗೊಳಗಾದ ಹಿಮಾಚಲ ಪ್ರದೇಶಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಈ ವೇಳೆ 1,500 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಅನ್ನು ಘೋಷಿಸಿದ್ದಾರೆ.

ಪ್ರಧಾನಿ ಮೋದಿ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ನಂತರ ಕಾಂಗ್ರಾದಲ್ಲಿ ಸಭೆ ನಡೆಸಿ, ಕೈಗೊಂಡ ಪರಿಹಾರ ಮತ್ತು ಪುನರ್ವಸತಿ ಕ್ರಮಗಳನ್ನು ಪರಿಶೀಲಿಸಿದರು. ಪ್ರವಾಹದಿಂದ ಮೃತರಾದವರ ಹತ್ತಿರದ ಸಂಬಂಧಿಕರಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದರು.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ, ಬಿಜೆಪಿ ನಾಯಕರು, ಸಂತ್ರಸ್ತ ಕುಟುಂಬಗಳು ಮತ್ತು ಕಾಂಗ್ರಾದಲ್ಲಿ ರಕ್ಷಣಾ ಸೇವೆಗಳಲ್ಲಿ ತೊಡಗಿರುವ ಜನರೊಂದಿಗೆ ನಡೆದ ಸಭೆಯಲ್ಲಿ ಪ್ರಧಾನಿ ಮೋದಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯಗಳ ಪುನರ್ನಿರ್ಮಾಣಕ್ಕೆ ಅಗತ್ಯವಾದ ಎಲ್ಲಾ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ