Thursday, December 1, 2022

Latest Posts

ಮೊರ್ಬಿ ತೂಗು ಸೇತುವೆ ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ: ಅಧಿಕಾರಿಗಳ ವಿರುದ್ಧ ಅಸಮಾಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೊರ್ಬಿ ತೂಗು ಸೇತುವೆ ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೇರಿ ಅಧಿಕಾರಿಗಳ ಜೊತೆ ಮೊರ್ಬಿಗೆ ತೆರಳಿದ ಪ್ರಧಾನಿ ಮೋದಿ , ಕಳಪೆ ಕಾಮಗಾರಿ, ಪ್ರವಾಸಿಗರಿಗೆ ಸೂಕ್ತ ಮಾಹಿತಿ, ನಿಯಂತ್ರಣ ಮಾಡಲು ವ್ಯವಸ್ಥೆ ಮಾಡದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತೂಗು ಸೇತುವೆ ಬದಿಯಲ್ಲಿ ನಿಂತು ಪರಿಶೀಲನೆ ನಡೆಸಿದ ಪ್ರಧಾನಿ ಮೋದಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಪ್ರಧಾನಿ ಮೋದಿ ಅಧಿಕಾರಿಗಳಿಗೆ ತಾಕೀತು ಮಾಡುತ್ತಿರುವ ಹಾಗೂ ಗರಂ ಆಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತೂಗು ಸೇತುವೆ ದುರಂತದ ಸಾವು ನೋವು ಹೆಚ್ಚುತ್ತಲೇ ಇದೆ. ಸದ್ಯ 135 ಮಂದಿ ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ. 170ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ ನಾಪತ್ತೆಯಾದವರಿಗಾಗಿ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!