ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ಲೋಕಸಭಾ ಚುನಾವಣೆಯ ಗೆಲುವಿನ ನಂತರ ಇದೇ ಮೊದಲ ಬಾರಿಗೆ ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ. ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಅವರ ಮೊದಲ ಭೇಟಿ ಇದಾಗಿದೆ.
ಪ್ರಧಾನಿ ಮೋದಿ ಸ್ವಾಗತಕ್ಕೆ ವಾರಾಣಸಿ ಸಜ್ಜಾಗಿದ್ದು, ಬೃಹತ್ ರೋಡ್ ಶೋ ನಡೆಯಲಿದೆ. ಜತೆಗೆ ರೈತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, 9.26 ಕೋಟಿಗೂ ಹೆಚ್ಚು ರೈತರಿಗೆ ಆದಾಯ ಬೆಂಬಲ ಯೋಜನೆಯ ಭಾಗವಾಗಿ ಪ್ರಧಾನ ಮಂತ್ರಿ 20,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಿದ್ದಾರೆ.
ನಂತರ ಸಂಜೆ 7 ಗಂಟೆಗೆ ದಶಾಶ್ವಮೇಧ ಘಾಟ್ನಲ್ಲಿ ಗಂಗಾ ಆರತಿಗೆ ಪ್ರಧಾನಿ ಮೋದಿ ಸಾಕ್ಷಿಯಾಗಲಿದ್ದಾರೆ. ರಾತ್ರಿ 8 ಗಂಟೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಿದ್ದಾರೆ.