ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಮನೆಗೆ ತೆರಳಿ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ: ವಿಡಿಯೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯವರಿಗೆ 95ನೇ ಹುಟ್ಟುಹಬ್ಬ ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಹೂಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ಪ್ರಧಾನಿ ಮೋದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಥ್‌ ನೀಡಿದರು.

ಅಡ್ವಾಣಿ ನಿವಾಸಕ್ಕೆ ತೆರಳಿದ ಪ್ರಧಾನಿ ಮೋದಿಯವರನ್ನು ಅಡ್ವಾಣಿ ಪುತ್ರಿ ಪ್ರತಿಭಾ ಅಡ್ವಾಣಿ ಸ್ವಾಗತಿಸಿದರು. ಬಳಿಕ ಪ್ರಧಾನಿ ಅಡ್ವಾಣಿ ಅವರು ಕುಳಿತ ಸ್ಥಳಕ್ಕೆ ತೆರಳಿ ಪುಷ್ಪಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು. ಬಳಿಕ ಮೋದಿ, ರಾಜನಾಥ್ ಸಿಂಗ್ ಮತ್ತು ಅಡ್ವಾಣಿ ಕೆಲಕಾಲ ಮಾತುಕತೆ ನಡೆಸಿದರು. ವಿಡಿಯೋದಲ್ಲಿ ಮೋದಿ ಮತ್ತು ಅಡ್ವಾಣಿ ಪರಸ್ಪರ ಸಂತೋಷದಿಂದ ಮಾತನಾಡುತ್ತಿರುವುದು ಕಂಡುಬಂದಿದೆ.

ಅಡ್ವಾಣಿ ಅವರ ಹುಟ್ಟುಹಬ್ಬಕ್ಕೆ ಬಿಜೆಪಿ ನಾಯಕರು ಮತ್ತು ಗಣ್ಯರು ಶುಭ ಹಾರೈಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರು ಶುಭಾಶಯ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!