ಪ್ರಧಾನಿ ಮೋದಿ ಸಮುದ್ರ ಒಳಗೆ ಹೋಗಿ ಅಲ್ಲಿ ಡ್ರಾಮಾ ಮಾಡುತ್ತಾರೆ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರ ದ್ವಾರಕಾ ಪೂಜೆ ಮಾಡಿದ್ದು, ಅದೊಂದು ನಾಟಕ ಎಂದು ಸಂಸದ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.

ಪುಣೆಯ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಒಮ್ಮೆ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ. ಮತ್ತೊಮ್ಮೆ ಸಮುದ್ರ ಒಳಗೆ ಹೋಗಿ ಅಲ್ಲಿ ಡ್ರಾಮಾ ಮಾಡುತ್ತಾರೆ. ಸಮುದ್ರಕ್ಕೆ ಇಳಿಯುತ್ತಿದ್ದಂತೆ ಅವರು ದೇವರೇ ತಮಗೇನು ಆಗದೇ ಇದ್ದರೆ ಸಾಕಪ್ಪ ಅನ್ನೋ ಭೀತಿಯಲ್ಲಿದ್ದರು. ಅವರು ಇಂತಹ ಡ್ರಾಮಾಗಳನ್ನು ಮಾಡೋದಾದರೂ ಏಕೆ? ಅವರು ರಾಜಕೀಯವನ್ನು ತಮಾಷೆಯ ವಿಚಾರ ಎಂಬಂತೆ ಬಿಂಬಿಸಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ.
ರಾಹುಲ್‌ ಗಾಂಧಿ ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ಸನಾತನ ಧರ್ಮದ ಅಸ್ತಿತ್ವವನ್ನು ಮತ್ತೆ ಪ್ರಶ್ನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಫೆಬ್ರುವರಿ 25ರಂದು ಗುಜರಾತ್‌ನ ದ್ವಾರಕಾದಲ್ಲಿ ಅಳವಾದ ನೀರಿನಲ್ಲಿ ಮುಳುಗಿ ದ್ವಾರಕಾಧೀಶ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!