ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆ.9 ಮತ್ತು 10ರಂದು ನಡೆಯುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ವಿವಿಧ ದೇಶಗಳ ನಾಯಕರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಈ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ನಾಯಕರೊಂದಿಗೆ ಸುಮಾರು 15 ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆ ಇದೆ.
ಇಂದು ಅಮೆರಿಕಾ, ಮಾರಿಷಸ್ ಹಾಗೂ ಬಾಂಗ್ಲಾದೇಶದ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಾಳೆ ಜಿ20 ಸಭೆ ನಡೆಯಲಿದೆ. ಸಭೆಯ ಬಳಿಕ ಬ್ರಿಟನ್, ಜಪಾನ್, ಇಟಲಿ ಹಾಗೂ ಜರ್ಮನಿ ದೇಶದ ನಾಯಕರೊಂದಿಗೆ ಮತ್ತು ನಾಡಿದ್ದು ಫ್ರಾನ್ಸ್‌ನ ಅಧ್ಯಕ್ಷ ಇಮಾನ್ಯುಯಲ್ ಮಾಕ್ರಾನ್ ಜತೆ ಮಧ್ಯಾಹ್ನದ ಭೋಜನ ಮಾಡಲಿದ್ದಾರೆ. ಇದೇ ವೇಳೆ ಇಬ್ಬರು ನಾಯಕರು ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಇನ್ನು ಕೆನಡಾ, ಕ್ಯಾಮರೂಸ್, ಟರ್ಕಿ, ಯುಎಇ, ದಕ್ಷಿಣ ಕೊರಿಯಾ, ಐರೋಪ್ಯ ಒಕ್ಕೂಟ, ಬ್ರೆಜಿಲ್ ಹಾಗೂ ನೈಜಿರಿಯಾ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ಅವರ ಸಭೆ ಆಯೋಜನೆಗೊಂಡಿದ್ದು, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ.