ಪಿಎಂ ವಿಶ್ವಕರ್ಮ ಯೋಜನೆಗೆ ಇಂದು ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಶ್ವಕರ್ಮ ಜಯಂತಿ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈ ಯೋಜನೆಯಲ್ಲಿ ಕೇಂದ್ರ ಸರ್ಕಾರವು ಕುಶಕರ್ಮಿಗಳಿಗೆ ಮೂರು ಲಕ್ಷ ರೂಪಾಯಿವರೆಗೆ ಆಧಾರ ರಹಿತ ಸಾಲ, 15 ಸಾವಿರ ರೂಪಾಯಿಗಳವರೆಗಿನ ಟೂಲ್ ಕಿಟ್, ಕೌಶಲ್ಯಾಭಿವೃದ್ಧಿಗೆ ತರಬೇತಿ ಮತ್ತು ದೈನಂದಿನ 500 ರೂಪಾಯಿ ಸಂಭಾವನೆ, ಸಂಪೂರ್ಣ ತಯಾರಾದ ಉತ್ಪನ್ನಗಳಿಗೆ ಕ್ವಾಲಿಟಿ ಸರ್ಟಿಫಿಕೇಷನ್, ಬ್ರಾಂಡಿಂಗ್ ಮತ್ತು ಜಾಹೀರಾತು ಮಾದರಿಯಲ್ಲಿ ಮಾರ್ಕೆಟಿಂಗ್ ನೆರವು ಸೇರಿದಂತೆ ಹಲವು ಸೌಲಭ್ಯಗಳು ಸಿಗಲಿವೆ. ಪಿಎಂ ವಿಶ್ವಕರ್ಮ ಯೋಜನೆಯು ಸಾಂಪ್ರದಾಯಿಕ ಕರಕುಶಲತೆಯಲ್ಲಿ ತೊಡಗಿರುವ ವ್ಯಕ್ತಿಗಳನ್ನು ಬೆಂಬಲಿಸಲು ಮತ್ತು ಪ್ರೋತ್ಸಾಹಿಸಲು ಮಾಡಿರುವ ಯೋಜನೆ ಇದಾಗಿದೆ.

ಇಂದು ನವದೆಹಲಿಯ ದ್ವಾರಕಾದ ಯಶೋಭೂಮಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!