ಯಾವತ್ತು ಪ್ರಧಾನಿ ಮೋದಿ ಸೋಲಲ್ಲ, ರಾಹುಲ್ ಗಾಂಧಿಗೆ ಮದುವೆ ಆಗಲ್ಲ: ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಹಾರದಲ್ಲಿ ವಿಪಕ್ಷಗಳು ನಡೆಸಿದ ಸಭೆ ದೇಶದ ಉಳಿತಿಗಾಗಿ ಅಲ್ಲ. ಬದಲಾಗಿ ಯಾವ ರೀತಿ ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸೋಲಿವುದು ಎಂಬುದರ ಬಗ್ಗೆ ಚರ್ಚೆ ನಡೆಸಲು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ಬೆಳಗಾವಿಯಲ್ಲಿ ಮುಂದಿನ ಲೋಕಸಭೆ ಚುನಾವಣೆ ಭಾಗವಾಗಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವಿಪಕ್ಷಗಳು ಸಭೆ ನಡೆಸಿವೆ ಆದ್ರೆ ಪ್ರಧಾನಿ ಮೋದಿ ಸೋಲಲ್ಲ, ಹಾಗೆಯೇ ರಾಹುಲ್ ಗಾಂಧಿಗೆ (Rahul Gandhi) ಮದುವೆ ಆಗಲ್ಲ ಎಂದು ವ್ಯಂಗ್ಯವಾಡಿದರು.

ನಾವು ಮಗದೊಮ್ಮೆ ಮೋದಿ ಅವರನ್ನು ಪ್ರಧಾನಿ ಮಾಡಲು ಸಂಕಲ್ಪ ಮಾಡಬೇಕು. ಮೋದಿ ಅವರು ಸ್ವಚ್ಛ, ದಕ್ಷ ಆಡಳಿತ ನೀಡಿದ್ದಾರೆ. ದೇಶದಲ್ಲಿ 12 ಕೋಟಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಪ್ರತಿ ಮನೆಗೆ ನೀರನ್ನು ಕೊಡುವ ಬಗ್ಗೆ ಪ್ರಧಾನಿ ಹೇಳಿದ್ದರು. ಅದರಂತೆ 40 ಲಕ್ಷ ಮನೆಗಳಿಗೆ ರಾಜ್ಯದಲ್ಲಿ ನೀರು ಕೊಡಲಾಗಿದೆ. ರೈತರು, ವಿದ್ಯಾರ್ಥಿಗಳಿಗೆ ಹಲವು ಕಾರ್ಯ ಮಾಡಿದ್ದಾರೆ. ದೇಶ ನರೇಂದ್ರ ಮೋದಿ ಆಡಳಿತದಲ್ಲಿ ಸುರಕ್ಷಿತವಾಗಿದೆ. ಪಾಕಿಸ್ತಾನದ ಸೊಕ್ಕು ಅಡಗಿಸಿದ್ದು ಕೂಡ ಮೋದಿ ಎಂದು ಹೇಳಿದರು.

ವಿಧಾನಸಭೆ ಚುನಾವಣೆ ಸೋಲಿಗೆ ನಾನೇ ಹೊಣೆ‌

ನಾವು ವಿ ಪ್ರಾಮಾಣಿಕ ಕೆಲಸ ಮಾಡಿ ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇವೆ. 5,000 ಕೋಟಿ ಅನುದಾನದವನ್ನು ಉತ್ತರ ಕರ್ನಾಟಕ ನೀರಾವರಿಗೆ ಕೊಟ್ಟಿದ್ದೇನೆ. ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆಯ ಘೋಷಣೆ ಮಾಡಿದ್ದೇನೆ. ನಮ್ಮ ಅಭಿವೃದ್ಧಿ ಕಾರ್ಯ ಜನರಿಗೆ ತಲುಪಿಸುವುದರಲ್ಲಿ ನಾವು ವಿಫಲ ಆಗಿದ್ದೇವೆ.ಹಾಗಾಗಿ ವಿಧಾನಸಭೆ ಚುನಾವಣೆ ಸೋಲಿಗೆ ನಾನೇ ಹೊಣೆ‌ ಎಂದರು.

ನಾನು ರಾಜಕಾರಣದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿಲ್ಲ, ಮಾಡಿಕೊಳ್ಳಲ್ಲ. ಸೌಹಾರ್ದಯುತವಾಗಿ ಮನೆಗೆ ಬರುವವರನ್ನು ಬೇಡವೆನ್ನಲು ಆಗಲ್ಲ. ಮನೆಗೆ ಹೋಗದೆ ಕೆಲವರು ರಾಜಿ ಮಾಡಿಕೊಂಡಿದ್ದಾರೆ. ಬಿಜೆಪಿ ತಾಯಿ ಸಮಾನ, ಕಾರ್ಯಕರ್ತರು ಅಣ್ಣತಮ್ಮಂದಿರ ಸಮಾನ. ಬಿಜೆಪಿ ಕಾರ್ಯಕರ್ತರಿಗೆ ದ್ರೋಹ ಮಾಡುವ ಕೆಲಸವನ್ನು ಮಾಡಿಲ್ಲ ಎಂದರು.

ಬಿಜೆಪಿ ಸರ್ಕಾರದ ಮೇಲೆ ಪರ್ಸಂಟೇಜ್ ಆರೋಪ ಮಾಡಿದ್ದ ಕಾಂಗ್ರೆಸ್ ಇದೀಗ ಅಧಿಕಾರಕ್ಕೆ ಬಂದ ನಂತರ ರೇಟ್ ಫಿಕ್ಸ್ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ. ಈಗ ಪರ್ಸೆಂಟೇಜ್ ಫಿಕ್ಸ್ ಆಗುತ್ತಿದೆ. ಯಾವ ಯಾವ ಮಂತ್ರಿ ಗುತ್ತಿಗೆದಾರರನ್ನು ಕರೆದು ಏನ್ ಹೇಳಿದ್ದಾರೆ ಗೊತ್ತು. ಎಲ್ಲಾ ಕಡೆಗಳ ಪರ್ಸಂಟೇಜ್ ಫಿಕ್ಸ್ ಆಗುತ್ತಿವೆ. ದೆಹಲಿಯವರಿಗೆ ಈಗ ಕರ್ನಾಟಕ ಎಟಿಎಂ ಆಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!