ಸೋನಿಯಾ ಗಾಂಧಿ ಜನ್ಮದಿನ: ಶುಭ ಹಾರೈಸಿ, ದೀರ್ಘಾಯುಷ್ಯ ಕೋರಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಇಂದು 76ನೇ ವಸಂತಕ್ಕೆ ಕಾಲಿಡುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಶುಭಾಶಯ ಕೋರಿದ್ದಾರೆ.
ʼಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘಯುಷ್ಯ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆʼ ಎಂದು ಪ್ರಧಾನಿ ಟ್ವಿಟರ್‌ನಲ್ಲಿ ಶುಭ ಹಾರೈಸಿದ್ದಾರೆ.
ಸೋನಿಯಾ ಪ್ರಸ್ತುತ ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಅವರು ರಣತಾಬೋರ್‌ ನಲ್ಲಿ ತಮ್ಮ 76 ನೇ ಹುಟ್ಟುಹಬ್ಬವನ್ನು ತಮ್ಮ ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಕುಟುಂಬದ ಆಪ್ತ ಸ್ನೇಹಿತನ ಒಡೆತನದ ರೆಸಾರ್ಟ್‌ನಲ್ಲಿ ಆಚರಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!