ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚಂದ್ರಯಾನ 3 ಯಶಸ್ವಿಗೊಳಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿರುವ ಕಾರಣ ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರದ ಕೆಲ ರಸ್ತೆಗಳಲ್ಲಿ ಆಗಸ್ಟ್ 26ರಂದು ಸಂಚಾರ ಮಾರ್ಗ ಬದಲಾವಣೆ ಮಾಡಿ ಟ್ರಾಫಿಕ್ ಪೊಲೀಸರು ಸೂಚನೆ ನೀಡಿದ್ದಾರೆ.
ಆಗಸ್ಟ್ 26 ಬೆಳಗ್ಗೆ 4:30 ರಿಂದ ಬೆಳಗ್ಗೆ 9:30 ರವರೆಗೆ ಕೆಳಕಂಡ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಪೋಲಿಸರು ಮನವಿ ಮಾಡಿದ್ದಾರೆ.
ಓಲ್ಡ್ ಏರ್ಪೋರ್ಟ್ ರಸ್ತೆ, ಓಲ್ಡ್ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ,ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ (ಮೇಖ್ರಿ ಸರ್ಕಲ್) ಬಳಸದಿರುವಂತೆ ಪೊಲೀಸರು ತಿಳಿಸಿದ್ದಾರೆ.
ಸಿವಿ ರಾಮನ್ ರಸ್ತೆ, ಯಶವಂತಪುರ ಫ್ಲೈ ಓವರ್,ತುಮಕೂರು ರಸ್ತೆ , ಮಾಗಡಿ ರಸ್ತೆ, ಹೊರವರ್ತುಲ ರಸ್ತೆ ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ.
ಬೆಂಗಳೂರು ನಗರದೊಳಗೆ ಆಗಸ್ಟ್ 26ರ ಬೆಳಗಿನ ಜಾವ 4ಗಂಟೆಯಿಂದ ಬೆಳಗ್ಗೆ 11 ಗಂಟೆಯವರೆಗೆ ಭಾರೀ ಸರಕು ಸಾಗಾಣಿಕೆ ವಾಹನಗಳ ಸಂಚಾರ ನಿರ್ಬಂಧ ವಿಧಿಸಲಾಗಿದೆ.