Thursday, September 21, 2023

Latest Posts

ಭಾರತಕ್ಕೆ ಅಮೆರಿಕದ ಅಧ್ಯಕ್ಷ ಭೇಟಿ: ಜೋ ಬೈಡನ್‌ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನವದೆಹಲಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಭಾಗವಹಿಸದಿರುವುದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿರಾಸೆ ವ್ಯಕ್ತಪಡಿಸಿದ್ದು, ಈ ವಾರ ಭಾರತಕ್ಕೆ ಭೇಟಿ ನೀಡಲು ಎದುರು ನೋಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜೋ- ಬೈಡನ್ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎಂದು ಶ್ವೇತಭವನ ಪ್ರಕಟಣೆ ತಿಳಿಸಿದೆ.

ಸೆಪ್ಟೆಂಬರ್ 9 ಮತ್ತು 10 ರಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಜೋ ಬಿಡೆನ್ ನಿರ್ಧರಿಸಿದ್ದಾರೆ.  ಇದಕ್ಕೂ ಮುನ್ನ ಸೆಪ್ಟೆಂಬರ್‌ 8ರಂದು ಪ್ರಧಾನಿ ಮೋದಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಬಗ್ಗೆ ಅಮೆರಿಕದ ಶ್ವೇತಭವನ ಅಧಿಕೃತ ಮಾಹಿತಿ ನೀಡಿದೆ.

ಜಿ-20 ರಾಷ್ಟ್ರಗಳ ಪಟ್ಟಿಯಲ್ಲಿ ಬಹುತೇಕ ದೇಶಗಳು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳೇ ಆಗಿವೆ. ಭಾರತ, ರಷ್ಯಾ, ಚೀನಾ, ಬ್ರೆಜಿಲ್ & ದಕ್ಷಿಣ ಆಫ್ರಿಕಾ ಇರುವ ಒಂದು ಶಕ್ತಿಶಾಲಿ ಗುಂಪು ಜಿ-20. ಈ ಕಾರಣಕ್ಕೆ ಜಿ-20 ಶೃಂಗಸಭೆ ಜಗತ್ತಿನ ಗಮನ ಸೆಳೆದಿದೆ. ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಜಿ-20 ಶೃಂಗಸಭೆ, ಭಾರತದ ಶಕ್ತಿಯನ್ನು ಮತ್ತೆ ಜಗತ್ತಿಗೆ ತೋರಿಸಲಿದೆ. ಹೀಗಾಗಿಯೇ ಭಾರತ ಕೂಡ ಜಿ-20 ಸಭೆಗಾಗಿ ಭಾರಿ ಸಿದ್ಧತೆ ಮಾಡಿಕೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!