Monday, September 26, 2022

Latest Posts

ಪ್ರಧಾನಿ ಮೋದಿಯವರ ಜನ್ಮದಿನ : 300 ಕ್ಕೂ ಹೆಚ್ಚು ಕಾರ್ಯಕರ್ತರಿಂದ ರಕ್ತದಾನ

ಹೊಸದಿಗಂತ ವರದಿ, ಬಾಗಲಕೋಟೆ:
ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾಪಾರ್ಟಿ ಯುವಮೋರ್ಚಾ ಬಾಗಲಕೋಟ ವಿಧಾನ ಸಭಾ ಮತಕ್ಷೇತ್ರದಿಂದ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವರಾದ ಸಿ. ಸಿ ಪಾಟೀಲ್, ಹಾಗೂ ಶಾಸಕರಾದ ಡಾ. ವೀರಣ್ಣ ಚರಂತಿಮಠ ಉದ್ಘಾಟಿಸಿದರು.
ಮೋದಿಯವರ ಜನ್ಮದಿನದ ಪ್ರಯುಕ್ತ ಮಧ್ಯಾಹ್ನದ ವೇಳೆಗೆ ೩೦೦ ಕ್ಕೂ ಹೆಚ್ಚು ಕಾರ್ಯಕರ್ತರು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪಿ .ಹೆಚ್ ಪೂಜಾರ, ಮಾಜಿ ವಿಧಾನ ಪರಿಷತ್ ಸದಸ್ಯ ನಾರಾಯಣಸಾ ಭಾಂಡಗೆ, ಜಿಲ್ಲಾ ಉಪಾಧ್ಯಕ್ಷ ಅಶೋಕ ಲಿಂಬಾವಳಿ, ವಿಭಾಗ ಸಹ ಪ್ರಭಾರಿ ಬಸವರಾಜ ಯಂಕಚಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ವಿ ನಾಯ್ಕರ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ನಗರ ಅಧ್ಯಕ್ಷ ಸದಾನಂದ ನಾರಾ, ನಗರ ಯುವ ಮೋರ್ಚಾ ಅಧ್ಯಕ್ಷ ಚಂದ್ರು ಸರೂರ್, ಯುವಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!