Wednesday, September 17, 2025

ಪ್ರಧಾನಿ ಮೋದಿ ಹುಟ್ಟುಹಬ್ಬ: ಶ್ರೀಲಂಕಾದ ಕೊಲಂಬೊದ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದೇಶದ ವಿವಿಧ ಪಕ್ಷಗಳ ನಾಯಕರು, ಸೆಲೆಬ್ರಿಟಿಗಳು, ಉದ್ಯಮಿಗಳು, ಕ್ರೀಡಾಪಟುಗಳು ಮಾತ್ರವಲ್ಲದೆ ವಿದೇಶಗಳ ಅಧ್ಯಕ್ಷರು, ಪ್ರಧಾನಿಗಳು ಕೂಡ ನರೇಂದ್ರ ಮೋದಿಯವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುತ್ತಿದ್ದಾರೆ.

ಈ ನಡುವೆ ಶ್ರೀಲಂಕಾದ ಕೊಲಂಬೊದ ಬೊಹ್ರಾ ಮಸೀದಿಯಲ್ಲಿ ಪ್ರಧಾನಿ ಮೋದಿಯವರಿಗಾಗಿ ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಯಿತು.

ಮುಸ್ಲಿಂ ಸಮುದಾಯದ ಸದಸ್ಯರು ಮೋದಿಗೆ ಆರೋಗ್ಯ, ದೀರ್ಘಾಯುಷ್ಯ ಕೋರಿ ಪ್ರಾರ್ಥನೆ ಸಲ್ಲಿಸಿದ್ದು, ಭಾರತಕ್ಕೆ ಸೇವೆ ಸಲ್ಲಿಸುವಲ್ಲಿ ನಿರಂತರ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಶ್ರೀಲಂಕಾದಾದ್ಯಂತ ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಗುತ್ತಿದೆ. ಇದು ಎಲ್ಲಾ ಧರ್ಮಗಳು ಮತ್ತು ಸಮುದಾಯಗಳಲ್ಲಿ ಸದ್ಭಾವನೆಯನ್ನು ಪ್ರತಿಬಿಂಬಿಸುತ್ತದೆ. ಕೊಲಂಬೊದ ಬೊಹ್ರಾ ಸಮುದಾಯವು ಕೊಲಂಬೊದ ಹುಸೇನಿ ಮಸೀದಿಯಲ್ಲಿ ಪ್ರಾರ್ಥನೆಯನ್ನು ನಡೆಸಿದೆ. ಇದರ ಜೊತೆಗೆ ಕೊಲಂಬೊದ ಮಹಾಬೋಧಿ ಸೊಸೈಟಿಯಲ್ಲಿಯೂ ಪ್ರಾರ್ಥನೆಗಳನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ