ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಎಂಟ್ರಿ: ಉತ್ತರ ಕರ್ನಾಟಕದಲ್ಲಿ ಮತಯಾಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣೆ ಮೊದಲ ಹಂತ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮತ್ತು ಸೋಮವಾರ ಕರ್ನಾಟಕದಲ್ಲಿ ಮತ್ತೆ ಪ್ರವಾಸ ಮಾಡಲಿದ್ದಾರೆ. ಒಟ್ಟು 2 ದಿನಗಳ ಕಾಲ ಪ್ರಧಾನಿ ಮೋದಿ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದು, ಈ ವೇಳೆ ಐದು ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಾಳೆ, ನಾಡಿದ್ದು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರಧಾನಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ರಾಜ್ಯದಲ್ಲಿ ಸಂಚರಿಸಲಿರುವ ನರೇಂದ್ರ ಮೋದಿ ಉತ್ತರ ಕರ್ನಾಟಕದಲ್ಲಿ ಬಿಜೆಪಿ (BJP) ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ನಾಳೆ ದಾವಣಗೆರೆ, ಉತ್ತರ ಕನ್ನಡ ಮತ್ತು ಬೆಳಗಾವಿಯಲ್ಲಿ ಬಹಿರಂಗ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಂದು ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿದ್ದು, ಮರು ದಿನ ಕಲಬುರಗಿ, ಬಳ್ಳಾರಿ, ರಾಯಚೂರು, ಕೊಪ್ಪಳದಲ್ಲಿ ಆಯೋಜಿಸುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!