ದೆಹಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ: ಆಪ್ ಸರ್ಕಾರದ ವಿರುದ್ಧ ಕಿಡಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಮಕ್ಕಳ ಜೊತೆ ಸಂವಾದ ನಡೆಸಿದರು.

ಶಾಲೆಗಳಲ್ಲಿನ ಉತ್ತೀರ್ಣದ ಮಾನದಂಡಗಳ ಬಗ್ಗೆ ಚರ್ಚಿಸಿದರು. ಈ ವೇಳೆ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು.

ಈ ಸರ್ಕಾರ ಯಾರು ಪರೀಕ್ಷೆಯಲ್ಲಿ ಪಾಸ್ ಆಗುತ್ತಾರೆಂಬ ಖಾತರಿ ಇರುತ್ತದೆಯೋ ಅಂತಹ ವಿದ್ಯಾರ್ಥಿಗಳನ್ನು ಮಾತ್ರ 9ನೇ ತರಗತಿಯ ನಂತರ ಶಿಕ್ಷಣವನ್ನು ಮುಂದುವರಿಸಲು ಬಿಡುತ್ತಿತ್ತು ಎಂದು ನಾನು ಕೇಳಿದ್ದೇನೆ. ಸರ್ಕಾರದ ಮೇಲೆ ಕೆಟ್ಟ ಹೆಸರು ಬರಬಾರದೆಂದು ಈ ರೀತಿ ಮಾಡಲಾಗುತ್ತಿದೆ ಎಂದು ನನಗೆ ಮಾಹಿತಿ ಸಿಕ್ಕಿದೆ. ಇದರಿಂದ ಮಕ್ಕಳ ಶಿಕ್ಷಣದ ಮೇಲೆ ಬಹಳ ಗಂಭೀರ ಪರಿಣಾಮ ಬೀರಿದೆ ಎಂದು ಟೀಕಿಸಿದ್ದಾರೆ.

https://x.com/MumbaichaDon/status/1886321708644061600?ref_src=twsrc%5Etfw%7Ctwcamp%5Etweetembed%7Ctwterm%5E1886321708644061600%7Ctwgr%5Ee54a0f5f5ab6f62dae0fce02667d09a347ecddd5%7Ctwcon%5Es1_&ref_url=https%3A%2F%2Fwww.prajavani.net%2Fnews%2Findia-news%2Fto-guard-its-image-aap-govt-only-promotes-students-sure-to-pass-class-10-pm-modi-3152050

ಇದೇ ಫೆಬ್ರವರಿ 5ರಂದು ರಾಷ್ಟ್ರ ರಾಜಧಾನಿಗೆ ಚುನಾವಣೆ ನಡೆಯಲಿದ್ದು. ಶತಾಯ ಗತಾಯ ಡೆಲ್ಲಿ ಗದ್ದುಗೆಯನ್ನು ಹಿಡಿಯಲು ಬಿಜೆಪಿ ಯತ್ನಿಸುತ್ತಿದೆ. ಕಳೆದ 27 ವರ್ಷಗಳಿಂದ ರಾಷ್ಟ್ರ ರಾಜಧಾನಿಯ ಮೇಲಿನ ಹಿಡಿತವನ್ನು ಕಳೆದುಕೊಂಡಿರುವ ಬಿಜೆಪಿ ಈ ಬಾರಿ ಕೇಜ್ರಿವಾಲ್​ ನೇತೃತ್ವದ ಸರ್ಕಾರವನ್ನು ಬೀಳಿಸಿ ಅಧಿಕಾರ ಪಡೆಯಲು ಪ್ರಯತ್ನಿಸುತ್ತಿದೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!