ಅಯೊಧ್ಯೆಯಲ್ಲಿ ಇಂದು ಪ್ರಧಾನಿ ಮೋದಿ ಮಿಂಚಿನ ಸಂಚಾರ: ಏನೇನಿದೆ ಕಾರ್ಯಕ್ರಮಗಳು?

ಹೊಸದಿಗಂತ ವರದಿ, ಮಂಗಳೂರು:

ಪ್ರಭು ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಬರೋಬ್ಬರಿ 14 ಸಾವಿರ ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗೆ ಇಂದು  ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದು, ಪ್ರಧಾನಿಯ ಇಂದಿನ ಕಾರ್ಯಕ್ರಮಗಳು ಹೇಗಿದೆ ಎಂಬ ಕುತೂಹಲ ನಿಮ್ಮಲ್ಲಿದ್ದರೆ ಇಲ್ಲಿದೆ ಪ್ರೋಗ್ರಾಂ ಲಿಸ್ಟ್…

  • ಬೆಳಗ್ಗೆ 10.45ಕ್ಕೆ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮೋದಿ ಆಗಮನ
  • ಬೆಳಗ್ಗೆ 11.15ಕ್ಕೆ ರೈಲ್ವೆ ನಿಲ್ದಾಣ ಉದ್ಘಾಟನೆ
  • ಎರಡು ಹೊಸ ಅಮೃತ್ ಭಾರತ್, ಆರು ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ
  • 2183 ಕೋಟಿ ರೂ. ಗ್ರೀನ್‌ಫೀಲ್ಡ್ ಟೌನ್‌ಶಿಪ್‌ಗೆ ಅಡಿಗಲ್ಲು
  • 300 ಕೋಟಿ ರೂ. ವಷಿಷ್ಠ ಕುಂಜ್ ವಸತಿ ಯೋಜನೆ
  • ನವೀಕರಣಗೊಂಡಿರುವ ನಯಾಘಾಟ್‌ನಿಂದ ಲಕ್ಷ್ಮಣ ಘಾಟ್ ಉದ್ಘಾಟನೆ
  • ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ ಲಖನೌ-ಅಯೋಧ್ಯ ಹೈವೇ, ಅಯೋಧ್ಯ ಬೈಪಾಸ್, ವಾರಣಾಸಿ ಬೈಪಾಸ್, ಖುತಾರ್-ಲಖೀಂಪುರ ಹೈವೇ, ರಾಮಪಥ, ಭಕ್ತಿಪಥ, ಧರ್ಮಪಥ, ಶ್ರೀರಾಮ ಜನ್ಮಭೂಮಿ ಪಥ ರಸ್ತೆಗಳ ಉದ್ಘಾಟನೆ
  • ಮಧ್ಯಾಹ್ನ 12.15ಕ್ಕೆ ಅಯೋಧ್ಯೆ ವಿಮಾನ ನಿಲ್ದಾಣ ಉದ್ಘಾಟನೆ
  • ಮಧ್ಯಾಹ್ನ 1 ಗಂಟೆ ಬಳಿಕ ಮೋದಿ ಮೆಗಾ ರೋಡ್ ಶೋ
  • ಏರ್‌ಪೋರ್ಟ್‌ನಿಂದ ಅಯೋಧ್ಯೆ ನಗರದಲ್ಲಿ 15 ಕಿ.ಮೀ. ರೋಡ್ ಶೋ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!