Wednesday, August 10, 2022

Latest Posts

ಕೋವ್ಯಾಕ್ಸಿನ್ ಲಸಿಕೆ ಸ್ವೀಕರಿಸಿದ ಮೋದಿ: ಪ್ರಧಾನಿಯವರ ಬದ್ಧತೆಯಿಂದ ಪ್ರೇರಿತರಾಗಿದ್ದೇವೆ ಎಂದ ಭಾರತ್ ಬಯೋಟೆಕ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಕೋವ್ಯಾಕ್ಸಿನ್ ಲಸಿಕೆ ಸ್ವೀಕರಿಸದಕ್ಕೆ ಭಾರತ್ ಬಯೋಟೆಕ್ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಮಂತ್ರಿಯ ಬದ್ಧತೆಯಿಂದ ಪ್ರೇರೇಪಿತವಾಗಿರುವುದಾಗಿ ತಿಳಿಸಿದೆ.
ಇಂದಿನಿಂದ ದೇಶದಲ್ಲಿ ಎರಡನೇ ಹಂತದ ಕೊರೋನಾ ವ್ಯಾಕ್ಸಿನೇಷನ್ ಅಭಿಯಾನ ಆರಂಭವಾಗಿದ್ದು, 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆ ಇಂದು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಯಲ್ಲಿ ಪಿಎಂ ಮೋದಿ ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.
ಮೋದಿಯವರು ದೇಶೀಯ ಲಸಿಕೆ ಹಾಕಿಸಿಕೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಭಾರತ್ ಬಯೋಟೆಕ್ ಸಂಸ್ಥೆ, ‘ಆತ್ಮನಿರ್ಭರ ಭಾರತ ನಿರ್ಮಿಸಲು ಮಾನ್ಯ ಪ್ರಧಾನಮಂತ್ರಿಯವರ ಬದ್ಧತೆಯಿಂದ ಪ್ರೇರಿತರಾಗಿದ್ದೇವೆ. ನಾವೆಲ್ಲರೂ ಒಟ್ಟಾಗಿ ಕೊರೊನಾ ವಿರುದ್ಧ ಹೋರಾಡಿ, ವಿಜಯಶಾಲಿಯಾಗಬೇಕು’ ಎಂದು ಟ್ವೀಟ್ ಮಾಡಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಸಹಯೋಗದಲ್ಲಿ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಕೋವ್ಯಾಕ್ಸಿನ್ ಲಸಿಕೆ ತಯಾರಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss