ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ನರ್ಮದಾದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಿ, ದೇವಮೋಗ್ರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುವಾಗ ಅಲ್ಲಿ ನೆರೆದಿದ್ದ ಜನರಿಂದ ಆತ್ಮೀಯ ಸ್ವಾಗತ ದೊರೆಯಿತು. ರಸ್ತೆಯ ಇಕ್ಕೆಲಗಳಲ್ಲಿ ಸಾಂಪ್ರದಾಯಿಕ ನೃತ್ಯ ಪ್ರದರ್ಶಿಸುವ ಮೂಲಕ ಮೋದಿಗೆ ವಿಶೇಷ ಸ್ವಾಗತ ಕೋರಲಾಯಿತು.
ಬಳಿಕ, ನರ್ಮದಾದ ದೇವಮೋಗ್ರ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ ಸಲ್ಲಿಸಿದರು.

