ಪಂಜಾಬ್ ನಲ್ಲಿ ಪ್ರಧಾನಿ ಮೋದಿ ಭದ್ರತೆಯಲ್ಲಿ ಲೋಪ: ತನಿಖೆ ಕೋರಿ ಸುಪ್ರೀಂ ಕೋರ್ಟ್ ಗೆ ದಾಖಲಾಯಿತು ಅರ್ಜಿ, ನಾಳೆ ವಿಚಾರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್ ನಲ್ಲಿ ಉಂಟಾದ ಪ್ರಧಾನಿ ಮೋದಿ ಅವರ ಭದ್ರತೆಯಲ್ಲಿನ ಲೋಪದ ಕುರಿತು ಎಲ್ಲೆಡೆ ಆಕ್ರೋಶ ಕೇಳಿಬರುತ್ತಿದ್ದು, ಇದರ ಬೆನ್ನಲ್ಲೇ ಪಂಜಾಬ್ ಸರ್ಕಾರದಿಂದ ಗಂಭೀರ ಮತ್ತು ಉದ್ದೇಶಪೂರ್ವಕ ಲೋಪ ಆಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಈ ಸಂಬಂಧ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ನೇತೃತ್ವದ ಪೀಠ, ಪಂಜಾಬ್ ಸರ್ಕಾರದ ಸ್ಥಾಯಿ ವಕೀಲರಿಗೆ ಅರ್ಜಿಯ ಪ್ರತಿಯನ್ನು ಸಲ್ಲಿಸಲು ಲಾಯರ್ಸ್ ವಾಯ್ಸ್ ಗೆ ತಿಳಿಸಿದ್ದು, ಶುಕ್ರವಾರ ವಿಚಾರಣೆಗೆ ಬರಲಿದೆ.
ಹಿರಿಯ ವಕೀಲ ಮಣಿಂದರ್ ಸಿಂಗ್ ಅವರು ಈ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿದ್ದಾರೆ.
ಈ ಪಿಐಎಲ್ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮತ್ತು ಕೇಂದ್ರ ಸರ್ಕಾರದ ಕಕ್ಷಿದಾರರನ್ನು ಪ್ರಕರಣಕ್ಕೆ ಒಳಪಡಿಸಿದೆ.
‘ಪ್ರತಿವಾದಿ ನಂ. 2 (ಮುಖ್ಯ ಕಾರ್ಯದರ್ಶಿ) ಮತ್ತು ಪ್ರತಿವಾದಿ ನಂ.3 (ಡಿಜಿಪಿ) ರವರಿಗೆ ಹಾಗೂ ಪ್ರತಿವಾದಿ ಸಂಖ್ಯೆ. 4 (ಕೇಂದ್ರ) ಇಲಾಖಾ ಕ್ರಮ ಕೈಗೊಳ್ಳಿ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!