Friday, December 9, 2022

Latest Posts

ಇಂದಿನಿಂದ ಗುಜರಾತ್‌, ರಾಜಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಅಕ್ಟೋಬರ್ 30 ರಿಂದ ನವೆಂಬರ್ 1 ರವರೆಗೆ ಪ್ರಧಾನಿ ಮೋದಿ ಗುಜರಾತ್ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

ಅಕ್ಟೋಬರ್ 30 ರಂದು ವಡೋದರಾದಲ್ಲಿ ಸಿ-295 ವಿಮಾನ ತಯಾರಿಕಾ ಸೌಲಭ್ಯಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಮಾಡಲಿದ್ದಾರೆ. ಅಕ್ಟೋಬರ್ 31 ರಂದು ಪ್ರಧಾನಿ ಕೆವಾಡಿಯಾಗೆ ಭೇಟಿ ನೀಡಲಿದ್ದು ಏಕತಾ ಪ್ರತಿಮೆಯ ಬಳಿ ಸರ್ದಾರ್ ಪಟೇಲ್ ಅವರಿಗೆ ನಮನ ಸಲ್ಲಿಸಲಿದ್ದಾರೆ. ನಂತರ ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಬಳಿಕ ಬನಸ್ಕಾಂತ ಜಿಲ್ಲೆಗೆ ಆಗಮಿಸುವ ಪ್ರಧಾನಿ, ಅಲ್ಲಿ ಥರಾಡ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಹಮದಾಬಾದ್‌ನಲ್ಲಿ ಪ್ರಮುಖ ರೈಲ್ವೆ ಯೋಜನೆಗಳ ಲೋಕಾರ್ಪಣೆ ಮಾಡಲಿದ್ದಾರೆ. ನವೆಂಬರ್ 1 ರಂದು, ಪ್ರಧಾನಿ ಮೋದಿ ಅವರು ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯನ್ನು ತಲುಪಲಿದ್ದಾರೆ, ಅಲ್ಲಿ ಅವರು ‘ಮಂಗರ್ ಧಾಮ್ ಕಿ ಗೌರವ್ ಗಾಥಾ’ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರು ಗುಜರಾತಿನ ಪಂಚಮಹಲ್ ಜಿಲ್ಲೆಯ ಜಂಬುಘೋಡದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!