Thursday, March 23, 2023

Latest Posts

ರಾಜ್ಯಕ್ಕೆ ಪ್ರಧಾನಿ ಭೇಟಿ: ಮೈಸೂರು-ಬೆಂಗಳೂರು ಪ್ರಯಾಣಿಕರ ಮಾರ್ಗ ಬದಲಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ ಅಬ್ಬರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್​​ 12 ರಂದು ಮತ್ತೆ ರಾಜ್ಯಕ್ಕೆ ಬರಲಿದ್ದು, ಮಂಡ್ಯ ಜಿಲ್ಲೆಯ ಮದ್ದೂರಿಗೆ ಭೇಟಿ ನೀಡಲಿದ್ದಾರೆ. ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಧಾನಿ ಆಗಮನದ ಹಿನ್ನೆಲೆ ಮೈಸೂರು-ಬೆಂಗಳೂರಿಗೆ ಸಂಚರಿಸುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳು ಬನ್ನೂರು ಕಿರುಗಾವಲು, ಮಳವಳ್ಳಿ, ಹಲಗೂರು, ಕನಕಪುರದಿಂದ ಸಾಗಿ ಬೆಂಗಳೂರು ತಲುಪಬಹುದಾಗಿದೆ. ಮೈಸೂರಿನಿಂದ ಮಂಡ್ಯ ಮೂಲಕ ತುಮಕೂರಿಗೆ ಹೋಗುವ ವಾಹನಗಳು ಮೈಸೂರಿನಿಂದ ಶ್ರೀರಂಗಪಟ್ಟಣ, ಪಾಂಡವಪುರ, ನಾಗಮಂಗಲ, ಬೆಳ್ಳೂರು ಕ್ರಾಸ್ ಮೂಲಕ ತುಮಕೂರಿಗೆ ಹೋಗಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು ನಗರದಿಂದ ಮೈಸೂರಿಗೆ ತೆರಳುವ ವಾಹನಗಳು ಚನ್ನಪಟ್ಟಣ, ಹಲಗೂರು, ಮಳವಳ್ಳಿ, ಕಿರುಗಾವಲು ಬನ್ನೂರು ಮೂಲಕ ಮೈಸೂರಿಗೆ ವಾಹನಗಳು ತೆರಳಬಹುದಾಗಿದೆ. ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ವಾಹನಗಳು ಚನ್ನಪಟ್ಟಣ, ಹಲಗೂರು, ಮಳವಳ್ಳಿ ಮೂಲಕ ಕೊಳ್ಳೇಗಾಲ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಬಹುದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!