Monday, January 12, 2026

ಪ್ರಧಾನಿ ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವಲ್ಲ: ರಾಹುಲ್ ಗಾಂಧಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವುದು “ದೊಡ್ಡ ವಿಷಯ”ವಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

ಇಂದು ಗುಜರಾತ್‌ನ ಜುನಾಗಢ್ ಜಿಲ್ಲೆಯ ಕೆಶೋಡ್ ವಿಮಾನ ನಿಲ್ದಾಣದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಎಲ್ಲೆಡೆ ಜನ ವೋಟ್ ಚೋರಿ ಬಗ್ಗೆ ಮಾತನಾಡುತ್ತಿದ್ದಾರೆ . ಪ್ರಸ್ತುತ ದೇಶದ ಮುಂದಿರುವ ಅತ್ಯಂತ ಪ್ರಮುಖ ವಿಷಯವಾಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿ ಶನಿವಾರ ಮಣಿಪುರಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಮೋದಿ ಮಣಿಪುರಕ್ಕೆ ಭೇಟಿ ನೀಡುತ್ತಿರುವುದು ಒಳ್ಳೆಯ ವಿಚಾರ. ಆದರೆ ಮಣಿಪುರ ಬಹಳ ದಿನಗಳಿಂದ ಸಮಸ್ಯೆಯಲ್ಲಿದೆ. ಪ್ರಧಾನಿ ಈಗ ಅಲ್ಲಿಗೆ ಹೋಗಲು ನಿರ್ಧರಿಸಿದ್ದಾರೆ. ಆದ್ದರಿಂದ ಅದು ಈಗ ದೊಡ್ಡ ವಿಷಯವಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ಅವರು ಮತ ಕದ್ದಿದ್ದಾರೆ. ಇತ್ತೀಚೆಗೆ ಕರ್ನಾಟಕದಲ್ಲಿ ನಾವು ಅದನ್ನು ಸಾಬೀತುಪಡಿಸಿದ್ದೇವೆ. ಆದ್ದರಿಂದ, ಈಗ ಮುಖ್ಯ ವಿಷಯವೆಂದರೆ ಮತ ಕಳ್ಳತನ. ಎಲ್ಲೆಡೆ ಜನ ‘ವೋಟ್ ಚೋರಿ'(ಮತ ಕಳ್ಳ) ಬಗ್ಗೆ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!