ಹೊಸದಿಗಂತ ಡಿಜಿಟಲ್ ಡೆಸ್ಕ್;
ಪ್ರಧಾನಿ ನರೇಂದ್ರ ಮೋದಿ, ನಾಳೆ (ಆಗಸ್ಟ್ 10) ಕೇರಳದ ಭೂ ಕುಸಿತ ಪೀಡಿತ ವಯನಾಡು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಜಿಲ್ಲೆಯ ಎರಡು ಗ್ರಾಮಗಳಿಗೆ ಪ್ರಧಾನಿ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.
ಮೋದಿ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ಕಣ್ಣೂರು ತಲುಪಲಿದ್ದಾರೆ, ಅಲ್ಲಿಂದ ಅವರು ವಯನಾಡು ಭೂ ಕುಸಿತ ಪೀಡಿತ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಮಧ್ಯಾಹ್ನ 12.15ರ ಸುಮಾರಿಗೆ ವಯನಾಡ್ ಜಿಲ್ಲೆಯ ಚೂರಲ್ಮುಲಾ ಮತ್ತು ಮುಂಡಕ್ಕೈ ಗ್ರಾಮಕ್ಕೆ ಭೂ ಕುಸಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿ ಕಾರ್ಯಗಳ ಬಗ್ಗೆ ರಕ್ಷಣಾ ಪಡೆಗಳಿಂದ ಮಾಹಿತಿ ಪಡೆಯಲಿದ್ದಾರೆ.
ನಿರಾಶ್ರಿತ ಕಾಳಜಿ ಕೇಂದ್ರ ಮತ್ತು ಗಾಯಗೊಂಡಿರುವ ಆಸ್ಪತ್ರೆಗೆ ಭೇಟಿ ನೀಡಲಿದ್ದು, ಸಂತ್ರಸ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಮೋದಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ನಂತರ ಪ್ರಧಾನಿ ಇದೊಂದು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಪ್ರವಾಹ ಮತ್ತು ಭೂಕುಸಿತದಿಂದ ಇದುವರೆಗೆ ಮೃತ ಪಟ್ಟವರ ಸಂಖ್ಯೆ 418ಕ್ಕೆ ಏರಿದೆ. ಬಗೆದಷ್ಟು ಮೃತ ದೇಹಗಳು ಸಿಗುತ್ತಲೇ ಇರುವುದರಿಂದ ದುರಂತಕ್ಕೆ ಬಲಿಯಾದವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.