ಏಪ್ರಿಲ್ 29-30ರಂದು ಕರ್ನಾಟಕದಲ್ಲಿ ಮೋದಿ- ಎಲ್ಲೆಲ್ಲಿ ನಡೆಯಲಿದೆ ಪ್ರಚಾರ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಅನೇಕ ನಾಯಕರು ಆಗಮಿಸಿ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಈ ವೇಳೆ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರಮೋದಿಯವರು ಇದೇ ಶನಿವಾರ ಮತ್ತು ಭಾನುವಾರ (ಏ.29, 30) ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು
ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಪ್ರಧಾನಿಯವರ ಚುನಾವಣಾ ಕಾರ್ಯಕ್ರಮಗಳ ವಿವರ ಹೀಗಿದೆ

  • ಏ.29ರಂದು ಬೆಳಿಗ್ಗೆ 9 ಗಂಟೆಗೆ ಬೀದರ್ ಜಿಲ್ಲೆ ಹುಮ್ನಾಬಾದ್‍ನಲ್ಲಿ, ಮಧ್ಯಾಹ್ನ 1 ಗಂಟೆಗೆ ವಿಜಯಪುರದಲ್ಲಿ, 3ಕ್ಕೆ ಬೆಳಗಾವಿ ಜಿಲ್ಲೆ ಕುಡುಚಿಯಲ್ಲಿ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಂದು ಸಂಜೆ ಬೆಂಗಳೂರಿನಲ್ಲಿ ಮಾಗಡಿ ರಸ್ತೆಯ ನೈಸ್ ರೋಡ್‍ನಿಂದ ಸುಮನಹಳ್ಳಿವರೆಗೆ ಸುಮಾರು 4.5 ಕಿ.ಮೀ ದೂರ ರೋಡ್ ಷೋ ನಡೆಸಲಿದ್ದಾರೆ. ರೋಡ್ ಷೋ ಗೆ ಸುಮಾರು 450 ಬ್ಲಾಕ್‍ಗಳನ್ನು ಸಂಯೋಜಿಸಲಾಗಿದೆ.
  • ಏ.30ರಂದು ಪ್ರಧಾನಿಯವರು ಬೆಳಿಗ್ಗೆ 11.30ಕ್ಕೆ ಕೋಲಾರದಲ್ಲಿ, ಸಂಜೆ 4 ಗಂಟೆಗೆ ಹಾಸನ ಜಿಲ್ಲೆ ಬೇಲೂರಿನಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ ಮೈಸೂರಿನಲ್ಲಿ ಜೆ.ಎಸ್.ಎಸ್ ವಿದ್ಯಾಪೀಠ ವೃತ್ತದಿಂದ ಬನ್ನಿಮಂಟಪ ವೃತ್ತದ ವರೆಗೆ ಸುಮಾರು 5 ಕಿ.ಮೀ. ದೂರ ರೋಡ್ ಷೋ ನಡೆಸಲಿದ್ದಾರೆ

ಬಿಜೆಪಿ ಕಾರ್ಯಕರ್ತರಿಗೆ ಪ್ರೋತ್ಸಾಹಿಸಿದ ಪ್ರಧಾನಿ

ಸುದ್ದಿಗೋಷ್ಠಿಯಲ್ಲಿ ಶೋಭಾ ಕರಂದ್ಲಾಜೆ, ನರೇಂದ್ರಮೋದಿಯವರು ಇಂದು ರಾಜ್ಯದ 67 ಲಕ್ಷ 900 ಕಾರ್ಯಕರ್ತರೊಂದಿಗೆ ವಚ್ರ್ಯುವಲ್ ಮೂಲಕ ನೇರ ಸಂವಾದ ನಡೆಸಿ ಕಾರ್ಯಕರ್ತರಲ್ಲಿ ಹುರುಪು, ಉತ್ಸಾಹ ತುಂಬಿ ಪ್ರೇರಣೆ ನೀಡಿದ್ದಾರೆ. ರಾಜ್ಯದ 58,112 ಬೂತ್‍ಗಳಲ್ಲಿ, 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈ ಸಂವಾದವನ್ನು ಹಮ್ಮಿಕೊಳ್ಳಲಾಗಿತ್ತು. ಬೂತ್ ಮತ್ತು ಹೋಬಳಿ ಮಟ್ಟದಲ್ಲಿ ಟಿ.ವಿಗಳ ಮೂಲಕ ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಎಲ್‍ಇಡಿ ಸ್ಕ್ರೀನ್ ಮೂಲಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ. ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿ ಬೃಹತ್ ಪ್ರಮಾಣದಲ್ಲಿ ನೇರ ಸಂವಾದ ಕಾರ್ಯಕ್ರಮ ನಡೆದು ಯಶಸ್ವಿಯಾಗಿದೆ ಎಂದರು.

ರಾಜ್ಯದ ಅಭಿವೃದ್ಧಿಗೆ ಮನೆ ಮನೆ ಮತಯಾಚನೆಗೆ ಕರೆ

ಮೋದಿಯವರು ಸಾಮಾನ್ಯ ಕಾರ್ಯಕರ್ತನಾಗಿ ಬೆಳೆದು ಹಲವು ಜವಾಬ್ದಾರಿಗಳನ್ನು ಹೊತ್ತವರು. ಪಕ್ಷ ಅಸ್ತಿತ್ವದಲ್ಲಿರದ ಸಂದರ್ಭದಲ್ಲಿ ಯಾತ್ರೆಗಳ ಮೂಲಕ ವಾಜಪೇಯಿ, ಅಡ್ವಾಣಿ ಅವರೊಂದಿಗೆ ಪಕ್ಷ ಕಟ್ಟಿದ ಅಗ್ರಗಣ್ಯರಲ್ಲಿ ಒಬ್ಬರು. ದೇಶಾದ್ಯಂತ ಸಂಚರಿಸಿ, ಕಾರ್ಯಕರ್ತರ ನೋವು ಸಂಕಷ್ಟ ಮತ್ತು ಅವರ ಶ್ರಮ ಏನೆಂಬುದು ಅವರಿಗೆ ಗೊತ್ತಿದೆ. ಕಾರ್ಯಕರ್ತರನ್ನು ಇಷ್ಟು ಚೆನ್ನಾಗಿ ಬಲ್ಲವರು ಮೋದಿಯವರಿಗಿಂತ ಬೇರೊಬ್ಬರಿಲ್ಲ. ಸಂವಾದ ಕಾರ್ಯಕ್ರಮದ ಮೂಲಕ ಕಾರ್ಯಕರ್ತರಲ್ಲಿ ಅವರು ಶಕ್ತಿ ತುಂಬಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಏಕೆ ಅಗತ್ಯವೆಂಬುದನ್ನು ಪ್ರತಿಪಾದಿಸಿದ್ದಾರೆ. ಬಿಜೆಪಿ ಸರ್ಕಾರ ಇಲ್ಲದ ಕಡೆ ಅಭಿವೃದ್ಧಿ ಕುಂಠಿತಗೊಂಡಿದ್ದು, ಈ ರಾಜ್ಯಗಳಲ್ಲಿ ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂದು ಹೇಳಿದ್ದಾರೆ. ರಾಜ್ಯದ ಅಭಿವೃದ್ಧಿ ವೇಗಕ್ಕೆ ಬಿಜೆಪಿ ಸರ್ಕಾರ ಅಗತ್ಯವೆಂಬುದನ್ನು ಕಾರ್ಯಕರ್ತರು ಮನೆ-ಮನೆಗೆ ಹೋಗಿ ಮನವರಿಕೆ ಮಾಡಬೇಕು ಎಂದು ಕರೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

ಗ್ಯಾರಂಟಿಗೆ ವಾರಂಟಿಯೇ ಇಲ್ಲದ ಕಾಂಗ್ರೆಸ್

ಕಾಂಗ್ರೆಸ್ ಪಕ್ಷ ನೀಡುತ್ತಿರುವ ಗ್ಯಾರಂಟಿಗಳನ್ನು ಜನರು ನಂಬುವುದಿಲ್ಲ. ಕಾಂಗ್ರೆಸ್‍ನ ಯಾವುದೇ ಗ್ಯಾರಂಟಿಗೆ ವಾರಂಟಿ ಇಲ್ಲ. ಸುಳ್ಳು ಪ್ರಚಾರಗಳನ್ನು ನಡೆಸುತ್ತಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಕೋಮು ಗಲಭೆಗಳು ನಡೆದಿಲ್ಲ. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಕೋಮು ಗಲಭೆಗಳು, ಬಾಂಬ್ ಸ್ಫೋಟಗಳು ನಡೆದಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾಜಘಾತುಕ, ಕಾನೂನು ಬಾಹಿರ ಮತ್ತು ಭಯೋತ್ಪಾದನಾ ಚಟುವಟಿಕೆಗಳನ್ನು ನಿಯಂತ್ರಿಸಿದ್ದಾರೆ. ಸರ್ದಾರ್ ವಲ್ಲಭಬಾಯಿ ಪಟೇಲ್ ನಂತರ ಅಮಿತ್ ಶಾ ಅತ್ಯುತ್ತಮ ಗೃಹ ಸಚಿವರಾಗಿದ್ದಾರೆ ಎಂದು ಕು.ಶೋಭಾ ಕರಂದ್ಲಾಜೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಷ್ಟ್ರೀಯ ವಕ್ತಾರ ಗೋಪಾಲ್ ಅಗರ್ ವಾಲ್, ಬಿಜೆಪಿ ಮುಖ್ಯ ವಕ್ತಾರ ಎಂ.ಜಿ. ಮಹೇಶ್, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!