ಬಲರಾಮನಿಗೆ ಗೌರವದ ವಿದಾಯ, ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ(67) ಭಾನುವಾರದಂದು ಮೃತಪಟ್ಟಿದೆ. ಬಲರಾಮ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,”ಹಲವು ವರ್ಷಗಳಿಂದ ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದರು. ಅವನು ಚಾಮುಮಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದ. ಈಗ ಅವನ ಅಗಲಿಕೆಯಿಂದ ದುಖವಾಗಿದೆ. ಆತ್ಮಕ್ಕೆ ಶಾಂತಿ ಸಿಗಲಿ. ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ.

ಅತ್ಯಂತ ಸೌಮ್ಯ ಸ್ವಭಾವದ ಬಲರಾಮ ಆನೆ ಎಲ್ಲರ ಪ್ರೀತಿ ಪಾತ್ರವಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್ ಬಲರಾಮ ಆನೆ (67) ಭಾನುವಾರ ಸಾವನ್ನಪ್ಪಿತು. ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿತ್ತು. ಇದರಿಂದ ಆನೆ ಆಹಾರ, ನೀರು ಸೇವಿಸಲು ಆಗದಂತಹ ಸ್ಥಿತಿ ಉಂಟಾಗಿತ್ತು. ಪರಿಣಾಮವಾಗಿ ಬಲರಾಮ ಆನೆ ನಿತ್ರಾಣಗೊಂಡಿತ್ತು. ಆನೆಗೆ ಶಿಬಿರದಲ್ಲೇ ಪಶುವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆನೆ ಜೀವಬಿಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!